ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

ಪುಲ್ವಾಮದ ನಾಗ್ಬೆರನ್-ಟಾರ್ಸಾರ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.

ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಸ್ಥಳದಲ್ಲಿ ಎನ್ಕೌಂಟರ್ ಆರಂಭಿಸಿದ ಸೇನಾಪಡೆ ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ