ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ವಿದೇಶಿ ಲಸಿಕೆಗಳಿಗೆ ಅನುಮತಿ ಪ್ರಕ್ರಿಯೆ ಮತ್ತಷ್ಟು ಸಡಿಲಗೊಳಿಸಿದ ಡಿಸಿಜಿಐ

ಭಾರತದಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದ್ದು, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI)ವಿದೇಶಿ ಲಸಿಕೆಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಮತ್ತಷ್ಟು ಸಡಿಲಗೊಳಿಸಿದೆ.

ನವದೆಹಲಿ: ಭಾರತದಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದ್ದು, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI)ವಿದೇಶಿ ಲಸಿಕೆಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಮತ್ತಷ್ಟು ಸಡಿಲಗೊಳಿಸಿದೆ.

ಹೌದು.. ವಿದೇಶಿ ಲಸಿಕೆಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಮತ್ತಷ್ಟು ಸಡಿಲಗೊಳಿಸಿದ್ದು, ವಿದೇಶಗಳು ತಯಾರಿಸಿದ ಕೋವಿಡ್‌ ಲಸಿಕೆಗಳ ಪ್ರತಿ ಬ್ಯಾಚ್‌ ಅನ್ನು ಕಸೌಲಿಯ ಕೇಂದ್ರ ಔಷಧ ಪ್ರಯೋಗಾಲಯದಲ್ಲಿ ಪರೀಕ್ಷಿಸುವ ಮತ್ತು ಅವುಗಳ ಬಿಡುಗಡೆಗೂ ಮುನ್ನ ನಡೆಸಬೇಕಿದ್ದ ಪ್ರಯೋಗಗಳಿಗೆ ಭಾರತೀಯ  ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಸಂಸ್ಥೆ ವಿನಾಯಿತಿ ನೀಡಿದೆ. ಇದು ದೇಶದಲ್ಲಿ ಲಸಿಕೆಗಳ ಲಭ್ಯತೆಯ ಪ್ರಮಾಣವನ್ನು ಹೆಚ್ಚಿಸಲು ನೆರವಾಗಲಿದೆ ಎಂದು ಹೇಳಲಾಗಿದೆ.

ವಿದೇಶಿ ಲಸಿಕೆಗಳನ್ನು ಪೂರೈಸುವ ಮಾತುಕತೆ ವೇಳೆ ಫೈಜರ್‌ ಮತ್ತು ಸಿಪ್ಲಾ ಕಂಪನಿಗಳು ಈ ಕುರಿತು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದವು. ಈ ಹಿನ್ನೆಲೆಯಲ್ಲಿ ಡಿಸಿಜಿಐ ಈ ನಿರ್ಧಾರ ಪ್ರಕಟಿಸಿದ್ದು, 'ದೇಶದಲ್ಲಿ ಕೋವಿಡ್‌ ವ್ಯಾಪಕವಾಗಿ ಪಸರಿಸುತ್ತಿದೆ. ಈ ಸಂದರ್ಭದಲ್ಲಿ ಭಾರಿ ಪ್ರಮಾಣದಲ್ಲಿ ಲಸಿಕೆಗಳ  ಅವಶ್ಯಕತೆಗಳಿರುವ ಕಾರಣ ಆಮದು ಮಾಡಿಕೊಳ್ಳುವ ಲಸಿಕೆಗಳಿಗೆ ಈ ವಿನಾಯಿತಿ ನೀಡಲಾಗಿದೆ ಎಂದು ಡಿಸಿಜಿಐ ಹೇಳಿದೆ. ಈ ಹಿಂದೆ ದೇಶೀಯ ಲಸಿಕೆಗಳಾದ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳು ಕೂಡ ಕೊರೊನಾ ಸೋಂಕಿನ ವಿರುದ್ಧ ತುರ್ತು ಬಳಕೆಗೆ ಸ್ಥಳೀಯವಾಗಿ ಹಲವು ಹಂತದ ಪರೀಕ್ಷೆಗಳಿಗೆ  ಒಳಪಟ್ಟಿದ್ದವು.

'ತುರ್ತು ಸ್ಥಿತಿ ಸಂದರ್ಭದಲ್ಲಿ ನಿರ್ಬಂಧಿತ ಬಳಕೆಗಾಗಿ ಭಾರತದಲ್ಲಿ ಕೋವಿಡ್‌ ಲಸಿಕೆಗಳನ್ನು ಅನುಮೋದಿಸಲಾಗಿದೆ. ಇದೇ ರೀತಿ ಈಗಾಗಲೇ ಅಮೆರಿಕದ ಎಫ್‌ಡಿಎ, ಇಎಂಎ, ಯುಕೆ ಎಂಎಚ್‌ಆರ್‌ಎ, ಪಿಎಂಆರ್‌ಡಿ ಜಪಾನ್‌ನಲ್ಲಿ ನಿರ್ಬಂಧಿತ ಬಳಕೆಗೆ ಅನುಮೋದನೆ ದೊರೆತಿರುವ ಅಥವಾ ವಿಶ್ವ ಆರೋಗ್ಯ ಸಂಸ್ಥೆಯ  ತುರ್ತು ಬಳಕೆ ಪಟ್ಟಿಯಲ್ಲಿ ಇರುವ ಲಸಿಕೆಗಳಿಗೆ ಈ ವಿನಾಯಿತಿ ನೀಡಲಾಗಿದೆ ಎಂದು ಡಿಸಿಜಿಐ ಸ್ಪಷ್ಟನೆ ನೀಡಿದೆ.

ಆದಾಗ್ಯೂ, ಅವರ ಸಾರಾಂಶ ಲಾಟ್ ಪ್ರೋಟೋಕಾಲ್ ಮತ್ತು ಬ್ಯಾಚ್ ಅಥವಾ ಲಾಟ್ ವಿಶ್ಲೇಷಣೆಯ ಪ್ರಮಾಣಪತ್ರದ ಪರಿಶೀಲನೆಯನ್ನು ಸಿಡಿಎಲ್, ಕಸೌಲಿ ಪ್ರಮಾಣಿತ ಕಾರ್ಯವಿಧಾನಗಳ ಪ್ರಕಾರ ಬಿಡುಗಡೆ ಮಾಡಲು ಮತ್ತು ಲಸಿಕೆ ಬಿಡುಗಡೆ ಮೊದಲು ಸುರಕ್ಷತಾ ಫಲಿತಾಂಶಗಳಿಗಾಗಿ ಮೊದಲ 100  ಫಲಾನುಭವಿಗಳ ಮೇಲೆ ಏಳು ದಿನಗಳವರೆಗೆ ಮೌಲ್ಯಮಾಪನದ ಅಗತ್ಯವನ್ನು ಕೈಗೊಳ್ಳಬೇಕು ಎಂದು ಡಿಸಿಜಿಐ ಜೂನ್ 1 ರಂದು ನೀಡಿದ ನೋಟಿಸ್‌ನಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT