ಟಿಆರ್ ಎಸ್ ಪಕ್ಷ ತೊರೆದ ಇಟಾಲಾ ರಾಜೇಂದರ್; ಶಾಸಕ ಸ್ಥಾನಕ್ಕೆ ರಾಜಿನಾಮೆ: ಬಿಜೆಪಿ ಸೇರ್ಪಡೆ ಸಾಧ್ಯತೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಜಿ ಸಚಿವ ಇಟಾಲಾ ರಾಜೇಂದರ್ ಟಿಆರ್ ಎಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
ಹೈದರಾಬಾದ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಜಿ ಸಚಿವ ಇಟಾಲಾ ರಾಜೇಂದರ್ ಟಿಆರ್ ಎಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
ಕಳೆದ ಒಂದು ತಿಂಗಳ ಹಿಂದೆ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿತ್ತು. ಶೀಘ್ರದಲ್ಲೇ ಅವರು ತಮ್ಮ ರಾಜಿನಾಮೆ ಪತ್ರವನ್ನು ವಿಧಾನಸಭೆ ಸ್ಪೀಕರ್ ಗೆ ರಾಜಿನಾಮೆ ಪತ್ರ ರವಾನಿಸುವ ಸಾಧ್ಯತೆಯಿದೆ. ಇತ್ತೀಚೆಗೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು, ಶೀಘ್ರದಲ್ಲೇ ರಾಜೇಂದರ್ ಬಿಜೆಪಿ ಸೇರುವ ಸಾಧ್ಯತೆಯಿದೆ.
ನನ್ನ ಪ್ರಯತ್ನದ ಫಲವಾಗಿ ಕರೀಮ ನಗರ ಜಿಲ್ಲೆಯಲ್ಲಿ ಟಿಆರ್ ಎಸ್ ಹಲವು ಚುನಾವಣೆಗಳಲ್ಲಿ ಗೆಲುವು ಸಾಧಿಸಿದೆ. ಹುಜುರಾಬಾದ್ ಅಸೆಂಬ್ಲಿ ವಿಭಾಗವನ್ನು ಬಹುಮತದೊಂದಿಗೆ ಗೆದ್ದಿದ್ದೇನೆ ಜನರ ಬೆಂಬಲದಿಂದಾಗಿ ಗೆಲುವು ಸಾಧಿಸಿದ್ದೇನೆಯೇ ಹೊರತು ಟಿಆರ್ ಎಸ್ ಬಿ-ಫಾರ್ಮ್ ನಿಂದ ಅಲ್ಲ ಎಂದು ಕಿಡಿ ಕಾರಿದ್ದಾರೆ.
ಟಿಆರ್ ಎಸ್ ಬಿ ಫಾರಂ ನಿಂದ ನಿಜಾಮಾಬಾದ್ ಲೋಕಸಭೆಯಲ್ಲಿ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ಸಹ ಸೋತಿದ್ದರು ಎಂದು ರಾಜೇಂದರ್ ನೆನಪಿಸಿಕೊಂಡರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.