ದೇವೇಂದ್ರ ಫಡ್ನವೀಸ್ 
ದೇಶ

ಮಹಾರಾಷ್ಟ್ರದ ಮಹಾ ವಿಕಾಸ್ ಅಗಡಿಯಲ್ಲಿ ಹಲವು 'ಸೂಪರ್ ಸಿಎಂ' ಗಳಿದ್ದಾರೆ: ದೇವೇಂದ್ರ ಫಡ್ನವೀಸ್ ಲೇವಡಿ

ಮಹಾರಾಷ್ಟ್ರದ ಮಹಾ ವಿಕಾಸ್ ಅಗಡಿಯಲ್ಲಿ ಹಲವು ಮಂದಿ ಸೂಪರ್ ಸಿಎಂ ಗಳಿದ್ದು, ಕೇವಲ ಒಬ್ಬರ್ ಮುಖ್ಯಮಂತ್ರಿ ಇದ್ದಾರೆ ಎಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಲೇವಡಿ ಮಾಡಿದ್ದಾರೆ.

ನಾಗಪುರ: ಮಹಾರಾಷ್ಟ್ರದ ಮಹಾ ವಿಕಾಸ್ ಅಗಡಿಯಲ್ಲಿ ಹಲವು ಮಂದಿ ಸೂಪರ್ ಸಿಎಂ ಗಳಿದ್ದು, ಕೇವಲ ಒಬ್ಬರ್ ಮುಖ್ಯಮಂತ್ರಿ ಇದ್ದಾರೆ ಎಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಲೇವಡಿ ಮಾಡಿದ್ದಾರೆ.

ಸರ್ಕಾರಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಸೂಪರ್ ಸಿಎಂ ಗಳು ತೆಗೆದುಕೊಳ್ಳುತ್ತಿದ್ದಾರೆ ಎಂದು ದೇವೇಂದ್ರ ಫಡ್ನವಿಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 

ಹಲವು ಸಚಿವರು ಸೂಪರ್ ಸಿಎಂ ಗಳೆಂದು ತಮ್ಮನ್ನು ಭಾವಿಸಿ ಮಹತ್ವದ ನಿರ್ಧಾರಗಳನ್ನು ಘೋಷಿಸಿ ಕ್ರೆಡಿಟ್ ತೆಗೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಲಾಕ್ ಡೌನ್ ನಿಯಮ ಸಡಿಲಿಕೆ ಕುರಿತಂತೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ ಹಾಗೂ ಆಮ್ಲಜನಕ ಹಾಸಿಗೆಗಳ ಅಗತ್ಯವು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವ ಕಾರಣ ಮಹಾರಾಷ್ಟ್ರದ 18 ಜಿಲ್ಲೆಗಳಲ್ಲಿ ಶುಕ್ರವಾರದಿಂದ (ಜೂನ್ 4) ಕೋವಿಡ್‌ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದು ಸಚಿವ ವಿಜಯ ವಾಡೆಟ್ಟಿವರ್ ತಿಳಿಸಿದ್ದರು. ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಫಡ್ನವೀಸ್ ಒತ್ತಾಯಿಸಿದ್ದಾರೆ.

ಸರ್ಕಾರದಲ್ಲಿ ಮುಖ್ಯಮಂತ್ರಿ ಪ್ರಮುಖ ನಿರ್ಧಾರ ಕೈಗೊಳ್ಳಬೇಕು, ಆದರೆ ಸರ್ಕಾರದ ಕೆಲವು ಸಚಿವರು ತಾವೇ ಸಿಎಂ ಎಂದು ಭಾವಿಸಿಕೊಂಡು ನಿರ್ಧಾರ ಪ್ರಕಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!