ಸಾಂದರ್ಭಿಕ ಚಿತ್ರ 
ದೇಶ

ಕೊರೊನಾ ಸೋಂಕಿತರಲ್ಲಿ 'ಮಧುಮೇಹ ನಿರ್ವಹಣೆ'ಗೆ ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಅನಿಯಂತ್ರಿತ ಮಧುಮೇಹ ಹೊಂದಿರುವ ಕೋವಿಡ್-19 ರೋಗಿಗಳಲ್ಲಿ ಮ್ಯೂಕಾರ್ಮೈಕೋಸಿಸ್ ಅಥವಾ ಕಪ್ಪು ಶಿಲೀಂಧ್ರದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕೊರೊನಾ ಸೋಂಕಿತರ 'ಮಧುಮೇಹ ನಿರ್ವಹಣೆ'ಗೆ ಮಾರ್ಗಸೂಚಿ ಪ್ರಕಟಿಸಿದೆ.

ನವದೆಹಲಿ: ಅನಿಯಂತ್ರಿತ ಮಧುಮೇಹ ಹೊಂದಿರುವ ಕೋವಿಡ್-19 ರೋಗಿಗಳಲ್ಲಿ ಮ್ಯೂಕಾರ್ಮೈಕೋಸಿಸ್ ಅಥವಾ ಕಪ್ಪು ಶಿಲೀಂಧ್ರದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕೊರೊನಾ ಸೋಂಕಿತರ 'ಮಧುಮೇಹ ನಿರ್ವಹಣೆ'ಗೆ ಮಾರ್ಗಸೂಚಿ ಪ್ರಕಟಿಸಿದೆ.

ಕೋವಿಡ್-19 ರೋಗಿಗಳಲ್ಲಿ ಮಧುಮೇಹದ ರೋಗನಿರ್ಣಯ ಮತ್ತು ನಿರ್ವಹಣೆಯ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ವೈದ್ಯಕೀಯ ಮಾರ್ಗದರ್ಶನ ಬಿಡುಗಡೆ ಮಾಡಿದ್ದು, ಮಧುಮೇಹದಿಂದ ಬಳಲುತ್ತಿರುವ ಜನರು ಹೈಪರ್ ಗ್ಲೈಸೀಮಿಯಾ ಅಥವಾ ಅಧಿಕ ರಕ್ತದ ಗ್ಲುಕೋಸ್ʼನಿಂದ ಬಾಧಿತರಾಗಬಹುದು, ಇದು  ಅವರನ್ನ ಕಪ್ಪು ಶಿಲೀಂಧ್ರದ ಮತ್ತಷ್ಟು ಅಪಾಯಕ್ಕೆ ತಳ್ಳಬಹುದು. ಆದ್ದರಿಂದ ಮಧುಮೇಹದ ಇತಿಹಾಸ ಹೊಂದಿರುವ ಕೋವಿಡ್-19 ರೋಗಿಗಳ ಮೇಲೆ ತೀವ್ರ ನಿಗಾ ಇಡಬೇಕು ಮತ್ತು ಅದಕ್ಕೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬೇಕು ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ನಿರ್ದೇಶನ ನೀಡಿದೆ.

'ಹೈಪರ್ ಗ್ಲೈಸೀಮಿಯಾ ಪ್ರವೇಶದ ಸಮಯದಲ್ಲಿ ಪ್ರತಿಯೊಬ್ಬ ರೋಗಿಯನ್ನ ಕನಿಷ್ಠ ಎರಡು ರಕ್ತ ಗ್ಲುಕೋಸ್ ಮೌಲ್ಯಗಳೊಂದಿಗೆ (1 ಪೂರ್ವ-ಊಟ ಮತ್ತು 1 ಊಟದ ನಂತರದ ಮೌಲ್ಯ) ಗ್ಲುಕೋಮೀಟರ್ʼನಿಂದ ತಪಾಸಣೆ ಮಾಡಬೇಕು. ಮಧುಮೇಹ ಹೊಂದಿರುವ ಪ್ರತಿಯೊಬ್ಬ ರೋಗಿಯು ಮಧುಮೇಹದ ಆಹಾರದ  ಡಯಟ್ ನಲ್ಲಿರಬೇಕು. ದಯವಿಟ್ಟು ರೋಗಿಯ ಡಯಟ್ ಚಾರ್ಟ್ ನಲ್ಲಿ ಸಲಹೆ ನೀಡಿದ ಸಮಯ ಮತ್ತು ಪ್ರಮಾಣವನ್ನ ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಅಲ್ಲದೆ ವೈದ್ಯರು ರೋಗಿಗಳು ಈ ಡಯಟ್ ಚಾರ್ಟ್ ಅನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತಿದ್ದಾರೆಯೇ ಅನ್ನೋದನ್ನ ಖಚಿತಪಡಿಸಿಕೊಳ್ಳಿ' ಎಂದು  ಆರೋಗ್ಯ ಸಚಿವಾಲಯ ತನ್ನ ಮಾರ್ಗಸೂಚಿಗಳಲ್ಲಿ ತಿಳಿಸಿದೆ.

ಕೋವಿಡ್-19 ರೋಗಿಗೆ ಚಿಕಿತ್ಸೆ ನೀಡುವ ವೈದ್ಯಕೀಯ ಸೌಲಭ್ಯಗಳು ಮತ್ತು ವೈದ್ಯರ ವಿವರವಾದ ಮಾರ್ಗಸೂಚಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಲಾಗಿದೆ.

ಮಾರ್ಗಸೂಚಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೇ 24ರ ಮಾಹಿತಿಯಂತೆ, ಸುಮಾರು 5,424 ಬ್ಲ್ಯಾಕ್ ಫಂಗಸ್ ಪ್ರಕರಣಗಳು ದೇಶದ 18 ವಿವಿಧ ರಾಜ್ಯಗಳಲ್ಲಿ ಕಂಡುಬಂದಿದೆ. ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳಿವೆ. ಇದರಲ್ಲಿ 4,556 ಪ್ರಕರಣಗಳು ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾದವರಲ್ಲಿ ಕಂಡುಬಂದದ್ದಾಗಿದೆ.  ಉಳಿದವು ಕೊವಿಡ್ ಹೊರತಾದ ಆದರೆ, ಶೇ. 55ರಷ್ಟು ಸಕ್ಕರೆ ಕಾಯಿಲೆ ಇರುವವರಲ್ಲಿ ಕಂಡುಬಂದ ಪ್ರಕರಣಗಳು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್