ದೇಶ

ಪುಣೆ ಅಗ್ನಿ ಅವಘಡ, ಪಶ್ಚಿಮ ಬಂಗಾಳ ಸಿಡಿಲು ದುರಂತ; ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ ಮಾಡಿದ ಪ್ರಧಾನಿ ಮೋದಿ

Srinivasamurthy VN

ನವದೆಹಲಿ: ಪುಣೆಯಲ್ಲಿ ಸಂಭವಿಸಿರುವ ಭೀಕರ ಅಗ್ನಿ ಅವಘಡ ಮತ್ತು ಪಶ್ಚಿಮ ಬಂಗಾಳದಲ್ಲಿ ನಡೆದ ಸಿಡಿಲು ಬಡಿದು ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ಸಂತ್ರಸ್ಥರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಮೂಲಗಳ ಪ್ರಕಾರ ಪುಣೆಯ ಘೋಟ್ವಾಡೆ ಫಟಾ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಮಂದಿ ಕಾರ್ಮಿಕರು ಸಾವನ್ನಪ್ಪಿ ಹಲವಾರು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಪುಣೆಯ ಘೋಟ್ವಾಡೆ ಫಟಾ ಪ್ರದೇಶದಲ್ಲಿ 8ಕ್ಕೂ ಹೆಚ್ಚು  ಅಗ್ನಿಶಾಮಕ ದಳ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದು, ಈ ವಿಚಾರ ತಿಳಿದ ಕೂಡಲೇ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ಘೋಷಣೆ ಮಾಡಿದ್ದಾರೆ.

ಅವಘಡದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಸಿಡಿಲು ದುರಂತ ಸಂತ್ರಸ್ಥರಿಗೂ ಪರಿಹಾರ ಘೋಷಣೆ
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ್ದ ಸಿಡಿಲು ದುರಂತ ಸಂತ್ರಸ್ಥರಿಗೂ ಪರಿಹಾರ ನೀಡಿಕೆಗೆ ಅನುಮೋದನೆ ನೀಡಿದ್ದು, ಸಿಡಿಲು ಬಡಿದು ಸಾವನ್ನಪ್ಪಿದವರ ಕುಟುಂಬಸ್ಥರಿಗೆ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ 50 ಸಾವಿರ ರೂ ಪರಿಹಾರ ಘೋಷಣೆ ಮಾಡಿದ್ದಾರೆ.
 

SCROLL FOR NEXT