ಅನೂಪ್ ಚಂದ್ರಪಾಂಡೆ 
ದೇಶ

ಚುನಾವಣಾ ಆಯೋಗದ ನೂತನ ಮುಖ್ಯಸ್ಥರಾಗಿ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ನೇಮಕ

ಉತ್ತರ ಪ್ರದೇಶ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ಅವರು ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ನೇಮಕವಾಗಿದ್ದಾರೆ.

ನವದೆಹಲಿ: ಉತ್ತರ ಪ್ರದೇಶ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ಅವರು ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ನೇಮಕವಾಗಿದ್ದಾರೆ.

ಈ ಕುರಿತಂತೆ ಕೇಂದ್ರ ಕಾನೂನು ಮತ್ತು ಸಂಸದೀಯ ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ನೇಮಕ ಮಾಡಿದ್ದಾರೆ ಎಂದು ಹೇಳಿದೆ.

ಭಾರತೀಯ ಆಡಳಿತ ಸೇವೆಯ 1984ರ ಕೇಡರ್ ನ ಅಧಿಕಾರಿಯಾಗಿದ್ದ ಅನೂಪ್ ಚಂದ್ರಪಾಂಡೆ ಅವರು 2019 ಆಗಸ್ಟ್ ನಲ್ಲಿ ಉತ್ತರ ಪ್ರದೇಶ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿದ್ದರು. ಇದೀಗ ಚುನಾವಣಾ ಆಯೋಗದ ಇಬ್ಬರು ಮುಖ್ಯಸ್ಥರುಗಳ ಪೈಕಿ ಒಂದು ಸ್ಥಾನಕ್ಕೆ ಆಯ್ಕೆಯಾಗಿದ್ದು, ಇವರೊಟ್ಟಿಗೆ  ರಾಜೀವ್ ಕುಮಾರ್ ಅವರು ಕೂಡ ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್