ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು 92,596 ಹೊಸ ಕೇಸ್ ಪತ್ತೆ, 2,219 ಮಂದಿ ಸಾವು

ದೇಶದಲ್ಲಿ ಕೊರೋನಾ 2ನೇ ಅಲೆಯ ಪ್ರಭಾವ ಮತ್ತಷ್ಟು ಕಡಿಮೆಯಾಗಿರುವುದರ ಸ್ಪಷ್ಟ ಸುಳಿವು ಸಿಗುತ್ತಿದೆ. ಭಾರತದಲ್ಲಿ ಸತತ್ ಎರಡನೇ ದಿನವೂ ಲಕ್ಷಕ್ಕಿಂತ ಕೆಳಗೆ ದೈನಂದಿನ ಪ್ರಕರಣಗಳು ಪತ್ತೆಯಾಗಿವೆ.

ಸಂಗ್ರಹ ಚಿತ್ರ
Manjula VN
Updated On : 10 Jun 2021, 9:50 am

ನವದೆಹಲಿ; ದೇಶದಲ್ಲಿ ಕೊರೋನಾ 2ನೇ ಅಲೆಯ ಪ್ರಭಾವ ಮತ್ತಷ್ಟು ಕಡಿಮೆಯಾಗಿರುವುದರ ಸ್ಪಷ್ಟ ಸುಳಿವು ಸಿಗುತ್ತಿದೆ. ಭಾರತದಲ್ಲಿ ಸತತ್ ಎರಡನೇ ದಿನವೂ ಲಕ್ಷಕ್ಕಿಂತ ಕೆಳಗೆ ದೈನಂದಿನ ಪ್ರಕರಣಗಳು ಪತ್ತೆಯಾಗಿವೆ. 

ದೇಶದಲ್ಲಿ ಬುಧವಾರ ಬೆಳಿಗ್ಗೆ 8ಕ್ಕೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ 92,596 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 2,219 ಮಂದಿ ಸಾವನ್ನಪ್ಪಿದ್ದಾರೆ. 

ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,90,89,069ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,53,528ಕ್ಕೆ ಏರಿಕೆಯಾಗಿದೆ. 

Advertisement

Advertisement

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ನಡುವಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆ 12,31,415ಕ್ಕೆ ಇಳಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,62,664 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,75,04,126ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 19,85,967 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 37,01,93,563 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 23,90,58,360 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments