ಸಂಗ್ರಹ ಚಿತ್ರ 
ದೇಶ

ಕೋವಿಡ್ ಲಸಿಕೆ ಪ್ರಮಾಣಪತ್ರದ ವೈಯಕ್ತಿಕ ವಿವರ ತಿದ್ದಲು ಆನ್ ಲೈನ್ ಮೂಲಕ ಅವಕಾಶ: ಕೇಂದ್ರ ಸರ್ಕಾರ

ಕೋವಿಡ್‌ ಲಸಿಕೆ ಹಾಕಿಸಿಕೊಂಡ ನಂತರ ನೀಡಲಾಗಿರುವ ಪ್ರಮಾಣಪತ್ರದಲ್ಲಿ ನಮೂದಾಗಿರುವ ವೈಯಕ್ತಿಕ ವಿವರಗಳನ್ನು ತಿದ್ದುಪಡಿ ಮಾಡಿಕೊಳ್ಳುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ.

ನವದೆಹಲಿ: ಕೋವಿಡ್‌ ಲಸಿಕೆ ಹಾಕಿಸಿಕೊಂಡ ನಂತರ ನೀಡಲಾಗಿರುವ ಪ್ರಮಾಣಪತ್ರದಲ್ಲಿ ನಮೂದಾಗಿರುವ ವೈಯಕ್ತಿಕ ವಿವರಗಳನ್ನು ತಿದ್ದುಪಡಿ ಮಾಡಿಕೊಳ್ಳುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ.

ಫಲಾನುಭವಿಗಳು ‘ಕೋವಿನ್‌’ ವೆಬ್‌ಸೈಟ್‌ಗೆ ಭೇಟಿ ನೀಡಿ ತಿದ್ದುಪಡಿಗಳನ್ನು ಮಾಡಬಹುದು. ಲಸಿಕೆ ಪ್ರಮಾಣಪತ್ರದಲ್ಲಿ ಹೆಸರು, ಜನ್ಮದಿನಾಂಕ, ಲಿಂಗ ಸೇರಿದಂತೆ ಇತರ ವಿವರಗಳು ತಪ್ಪಾಗಿ ನಮೂದಾಗಿದ್ದರೆ ಅವುಗಳನ್ನು ಸರಿಪಡಿಸಬಹುದು ಎಂದು ಆರೋಗ್ಯ ಸೇತು ಆ್ಯಪ್‌ನ ಟ್ವಿಟರ್‌ ಖಾತೆಯಲ್ಲಿ ಬುಧವಾರ ತಿಳಿಸಲಾಗಿದೆ.

‘ಕೋವಿನ್‌ ಲಸಿಕೆ ಪ್ರಮಾಣಪತ್ರ’ವನ್ನು ಪ್ರಯಾಣದ ಸಂದರ್ಭದಲ್ಲಿ ಹಾಗೂ ಇತರ ಕೆಲವು ನಿರ್ದಿಷ್ಟ ಸೇವೆಗಳನ್ನು ಪಡೆಯುವಾಗ ಹಾಜರುಪಡಿಸಬೇಕಾಗುತ್ತದೆ. 

‘ಕೋವಿನ್‌’ ಪೋರ್ಟಲ್‌ನಲ್ಲಿ ನೋಂದಣಿ ಸಮಯದಲ್ಲಿ ನೀಡಿರುವ ಮೊಬೈಲ್‌ ಸಂಖ್ಯೆಯನ್ನು ಬಳಸಿ ಲಸಿಕೆಯ ಎಷ್ಟನೇ ಡೋಸ್‌ ಪಡೆಯಲಾಗಿದೆ ಎಂಬ ವಿವರವನ್ನು ಸಹ ಅಪ್‌ಡೇಟ್‌ ಮಾಡಬಹುದು ಎಂದೂ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel