ಕೇಂದ್ರ ಸರ್ಕಾರದ ವಿರುದ್ಧ 'ಜೈವಿಕ ಅಸ್ತ್ರ' ಆರೋಪ: ಲಕ್ಷದ್ವೀಪ ಸಿನಿಮಾ ನಿರ್ಮಾಪಕಿ ವಿರುದ್ಧ ಕೇಸ್
ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್-19 ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಬಿಜೆಪಿ ಮುಖಂಡರ ದೂರಿನ ಅನ್ವಯ ನಿರ್ಮಾಪಕಿ ಆಯೆಷಾ ಸುಲ್ತಾನಾ ವಿರುದ್ಧ ಲಕ್ಷದ್ವೀಪ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.
ನವದೆಹಲಿ: ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್-19 ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಬಿಜೆಪಿ ಮುಖಂಡರ ದೂರಿನ ಅನ್ವಯ ನಿರ್ಮಾಪಕಿ ಆಯೆಷಾ ಸುಲ್ತಾನಾ ವಿರುದ್ಧ ಲಕ್ಷದ್ವೀಪ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.
ಬಿಜೆಪಿಯ ಲಕ್ಷದ್ವೀಪ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್, ಲಕ್ಷದ್ವೀಪದ ಚೆತಿಯಾತ್ ದ್ವೀಪ ನಿವಾಸಿ ಆಯೆಷಾ ಸುಲ್ತಾನಾ ವಿರುದ್ಧ ದೂರು ದಾಖಲಿಸಿದ್ದಾರೆ ಕವರತ್ತಿ ಪೊಲೀಸರು ದಾಖಲಿಸಿರುವ ಎಫ್ಐಆರ್ ಅನ್ವಯ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ನಿರ್ಮಾಪಕಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮಲಯಾಳಂ ಟಿ.ವಿ ಚಾನೆಲ್ನಲ್ಲಿ ನಡೆದ ಚರ್ಚೆಯ ವೇಳೆ ಲಕ್ಷದ್ವೀಪದಲ್ಲಿ ಕೋವಿಡ್-19 ಹರಡಲು ಕೇಂದ್ರ ಸರ್ಕಾರವು ಜೈವಿಕ ಅಸ್ತ್ರಗಳನ್ನು ಬಳಸಿದೆ ಎಂದು ಆಯೆಷಾ ಆರೋಪಿಸಿದ್ದರು ಎನ್ನಲಾಗಿದೆ. ಆಯೆಷಾ ಸುಲ್ತಾನಾ ದೇಶ ವಿರೋಧಿ ಕೃತ್ಯ ಎಸಗಿದ್ದಾರೆಂದು ಬಿಜೆಪಿ ಮುಖಂಡರ ದೂರಿನಲ್ಲಿ ಆರೋಪಿಸಲಾಗಿದ್ದು, ಇದು ಕೇಂದ್ರ ಸರ್ಕಾರಕ್ಕೆ ಕಳಂಕ ತಂದಿದೆ ಎಂದು ದೂರಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.