ಮುಂಬೈ ಕಟ್ಟಡ ಕುಸಿತ: ಗುತ್ತಿಗೆದಾರನ ಬಂಧನ
ಮಾಲ್ವಾನಿಯಲ್ಲಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ರಂಜಾನ್ ಶೇಕ್ ನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಮಾಲ್ವಾನಿಯಲ್ಲಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ರಂಜಾನ್ ಶೇಕ್ ನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಬುಧವಾರ ರಾತ್ರಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಕಟ್ಟಡದ ಮಾಲೀಕ ರಫೀಕ್ ಸಿದ್ದಿಕಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಮುಂಬೈ ಹೊರವಲಯ ಮಾಲ್ವಾನಿಯಲ್ಲಿನ ಮೂರು ಅಂತಸ್ತಿನ ವಸತಿ ಕಟ್ಟಡ ಅದಕ್ಕೆ ಹೊಂದಿಕೊಂಡಂತಿದ್ದ ಏಕ ಅಂತಸ್ತಿನ ಕಟ್ಟದ ಮೇಲೆ ಕುಸಿದಿದ್ದರಿಂದ ಎಂಟು ಮಕ್ಕಳು ಸೇರಿದಂತೆ 11 ಮಂದಿ ದುರ್ಮರಣ ಹೊಂದಿದ್ದರು. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.