ದೇಶ

ಭಾರತದಲ್ಲಿ ಕೊರೋನಾ ಅಬ್ಬರ ಮತ್ತಷ್ಟು ಇಳಿಕೆ: ದೇಶದಲ್ಲಿಂದು 84,332 ಹೊಸ ಕೇಸ್ ಪತ್ತೆ, 4,002 ಮಂದಿ ಸಾವು

Manjula VN

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8ಕ್ಕೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ 84,332 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 4,002 ಮಂದಿ ಸಾವನ್ನಪ್ಪಿದ್ದಾರೆ. 

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,93,59,155ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,67,081ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ನಡುವಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆ 10,80,690ಕ್ಕೆ ಇಳಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,21,311 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,79,11,384ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 20,44,131 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 37,42,42,384 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 24,96,00,304 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ

SCROLL FOR NEXT