ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡ ಹೈದರಾಬಾದ್ ನ ನಿಜಾಮ್ ಕ್ಲಬ್ 
ದೇಶ

ಹೈದರಾಬಾದ್ ನ ನಿಜಾಮ್ ಕ್ಲಬ್ ನಲ್ಲಿ ಬೆಂಕಿ, ದೆಹಲಿಯ ರೋಹಿಂಗ್ಯಾ ನಿರಾಶ್ರಿತರ ಗುಡಿಸಲು ಭಸ್ಮ: ಸಾವು-ನೋವುಗಳಿಂದ ಪಾರು

ನಗರದ ಸೈಫಾಬಾದ್ ನ ಪ್ರತಿಷ್ಠಿತ ನಿಜಾಮ್ ಕ್ಲಬ್ ನಲ್ಲಿ ಭಾನುವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿದೆ.

ಹೈದರಾಬಾದ್: ನಗರದ ಸೈಫಾಬಾದ್ ನ ಪ್ರತಿಷ್ಠಿತ ನಿಜಾಮ್ ಕ್ಲಬ್ ನಲ್ಲಿ ಭಾನುವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿದೆ.

ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ. ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಆದರೆ ಆಸ್ತಿ-ಪಾಸ್ತಿಗೆ ಸ್ವಲ್ಪ ಹಾನಿಯುಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಳಗ್ಗೆ ನಿಜಾಮ್ ಕ್ಲಬ್ ನ ಸಿಬ್ಬಂದಿ ಕಟ್ಟಡದ ಬ್ಲಾಕ್ ವೊಂದರ ಪೆಂಟ್ ಹೌಸ್ ನಲ್ಲಿ ಬೆಂಕಿ ಹೊತ್ತಿಕೊಳ್ಳುವುದನ್ನು ಕಂಡು ಕೂಡಲೇ ಕ್ಲಬ್ ನ ಮುಖ್ಯಸ್ಥರಿಗೆ ತಿಳಿಸಿದರು. ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಗೆ ಸುದ್ದಿ ಮುಟ್ಟಿಸಲಾಯಿತು.
ಕೇವಲ ಹತ್ತೇ ನಿಮಿಷದಲ್ಲಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ ಹತ್ತಿಕೊಳ್ಳಲು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ತನಿಖೆಯ ನಂತರವಷ್ಟೇ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

50 ಗುಡಿಸಲುಗಳು ಭಸ್ಮ: ಆಗ್ನೇಯ ದೆಹಲಿಯ ಕಳಿಂದಿ ಕುಂಜ್ ಮೆಟ್ರೋ ನಿಲ್ದಾಣದ ಹತ್ತಿರ ಇರುವ ರೊಹಿಂಗ್ಯಾ ನಿರಾಶ್ರಿತ ಶಿಬಿರದಲ್ಲಿ ಬೆಂಕಿ ಸ್ಫೋಟವುಂಟಾಗಿ 50ಕ್ಕೂ ಹೆಚ್ಚು ಗುಡಿಸಲುಗಳು ನಾಶವಾಗಿವೆ.

ಕಳೆದ ರಾತ್ರಿ ಈ ದುರ್ಘಟನೆ ನಡೆದಿದ್ದು ಅಗ್ನಿಶಾಮಕ ಇಲಾಖೆಗೆ ಸುಮಾರು 11.55ರ ಹೊತ್ತಿಗೆ ಮಾಹಿತಿ ಸಿಕ್ಕಿದೆ. ದುರ್ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಯಶಸ್ವಿಯಾದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್