ದೇಶ

ಈವರೆಗೂ ರಾಜ್ಯಗಳಿಗೆ 26 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ

Nagaraja AB

ನವದೆಹಲಿ: ಈವರೆಗೂ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 26 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ ಲಸಿಕೆಯನ್ನು ಕೇಂದ್ರದಿಂದ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.

ಭಾರತ ಸರ್ಕಾರದ ಉಚಿತ ದರ ಹಾಗೂ ರಾಜ್ಯಗಳಿಂದ ನೇರ ಖರೀದಿ ಹಂತದಲ್ಲಿ ಈವರೆಗೂ ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯಗಳಿಗೆ 26,64,84,350 ಡೋಸ್ ಲಸಿಕೆಯನ್ನು ಪೂರೈಕೆ ಮಾಡಲಾಗಿದೆ. ಈ ಪೈಕಿ ವ್ಯರ್ಥ ಸೇರಿದಂತೆ ಒಟ್ಟಾರೇ 25,12,66,637 ಡೋಸ್ ಬಳಕೆಯಾಗಿರುವುದಾಗಿ ಅಧಿಕೃತ ಮಾಹಿತಿ ನೀಡಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, 1,53,79,233 (1.53 ಕೋಟಿ) ಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ಈಗಲೂ ಕೇಂದ್ರಾಡಳಿತ ಪ್ರದೇಶ ಹಾಗೂ ರಾಜ್ಯಗಳಲ್ಲಿದೆ. 4 ಲಕ್ಷಕ್ಕೂ ಹೆಚ್ಚು ಡೋಸ್ ಪೈಪ್ ಲೈನ್ ನಲ್ಲಿದ್ದು, ಮುಂದಿನ ಮೂರು ದಿನಗಳೊಳಗೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಪಡೆಯಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕೆ ಅಭಿಯಾನದಡಿ ಈವರೆಗೂ ಸುಮಾರು 25,31,95,048 ಡೋಸ್ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

SCROLL FOR NEXT