ಬೃಹತ್ ಸಿಂಕ್ ಹೋಲ್ ನಲ್ಲಿ ಮುಳುಗಿದ ಕಾರು 
ದೇಶ

'ಮಹಾ' ಮಳೆ: ನೋಡ ನೋಡ್ತಿದ್ದಂತೆಯೇ ಬೃಹತ್ ಸಿಂಕ್ ಹೋಲ್ ನಲ್ಲಿ ಮುಳುಗಿದ ಕಾರು: ವಿಡಿಯೋ ವೈರಲ್!

ಮಳೆಯ ಅಬ್ಬರಕ್ಕೆ ಮಹಾರಾಷ್ಟ್ರದ ಹಲವು ಪ್ರದೇಶಗಳು ನಲುಗಿವೆ. 

ಮುಂಬೈ: ಮಳೆಯ ಅಬ್ಬರಕ್ಕೆ ಮಹಾರಾಷ್ಟ್ರದ ಹಲವು ಪ್ರದೇಶಗಳು ನಲುಗಿವೆ. ಮುಂಬೈ ನಗರದಲ್ಲಿಯೂ ಮಳೆಯ ಅಬ್ಬರ ಜೋರಾಗಿದ್ದು, ಘಾಟ್ಕೋಪರ್ ಪ್ರದೇಶದಲ್ಲಿ ನೋಡ ನೋಡುತ್ತಿದ್ದಂತೆಯೇ ಮಳೆಯ ಅಬ್ಬರಕ್ಕೆ ಬೃಹತ್ ಸಿಂಕ್ ಹೋಲ್ ನಲ್ಲಿ ಕಾರು ಮುಳುಗಿರುವ ವಿಡಿಯೋ ವೈರಲ್ ಆಗತೊಡಗಿದೆ. 

ವರದಿಗಳ ಪ್ರಕಾರ, ಈ ಪ್ರದೇಶದಲ್ಲಿ ಬಾವಿ ಇತ್ತು. ಆದರೆ ಅದನ್ನು ಪಾರ್ಕಿಂಗ್ ಉದ್ದೇಶಕ್ಕೆ ಬಳಕೆ ಮಾಡುವ ಕಾರಣದಿಂದ ರಾಮ್ ನಿವಾಸ್ ಸೊಸೈಟಿಯ ನಿವಾಸಿಗಳು ಸಿಮೆಂಟ್ ನಿಂದ ಆ ಪ್ರದೇಶವನ್ನು ಮುಚ್ಚಿ ಪಾರ್ಕಿಂಗ್ ಪ್ರದೇಶವನ್ನಾಗಿ ಮಾಡಿಕೊಂಡಿದ್ದರು. ಮಳೆಯ ತೀವ್ರತೆಗೆ ಸಿಮೆಂಟ್ ಅಸ್ತವ್ಯಸ್ತಗೊಂಡಿದ್ದು ಬೃಹತ್ ಗಾತ್ರದ ಸಿಂಕ್ ಹೋಲ್ ಬಾಯ್ತೆರೆದುಕೊಂಡಿದ್ದು, ಸೊಸೈಟಿಯ ನಿವಾಸಿ ಪಂಕಜ್ ಮೆಹ್ತಾ ಅವರ ಕಾರು ಸಿಂಕ್ ಒಳಗೆ ಮುಳುಗಿ ಹೋಗಿದೆ. ಅದೃಷ್ಟವಶಾತ್ ಕಾರ್ ನಲ್ಲಿ ಯಾರೂ ಇಲ್ಲದೇ ಇದ್ದಿದ್ದರಿಂದ ಪ್ರಾಣ ಅಪಾಯಗಳು ಸಂಭವಿಸಿಲ್ಲ. 

ನಾವು ಹೊಣೆಯಲ್ಲ ಎಂದ ಬಿಎಂಸಿ: 

ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಎಂಸಿ, ಇದಕ್ಕೆ ತಾನು ಹೊಣೆಯಲ್ಲ ಎಂದು ಹೇಳಿದೆ. ಖಾಸಗಿ ಸೊಸೈಟಿಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಆದ್ದರಿಂದ ತಾನು ಇದಕ್ಕೆ ಹೊಣೆಯಾಗುವುದಿಲ್ಲ ಎಂದು ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!