ಸಂಜಯ್ ರಾವತ್ 
ದೇಶ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಶಿವಸೇನೆಯನ್ನು ಗುಲಾಮರಂತೆ ಕಾಣುತ್ತಿದ್ದರು: ಸಂಸದ ಸಂಜಯ್ ರಾವತ್

ಶಿವಸೇನೆಯನ್ನು ವಾಸ್ತವಿಕವಾಗಿ 'ಗುಲಾಮರು' ಎಂದು ಪರಿಗಣಿಸಲಾಗಿದ್ದು, 2014ರಿಂದ 2019ರವರೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಅಧಿಕಾರದಲ್ಲಿದ್ದಾಗ ಶಿವಸೇನೆಯನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಲಾಯಿತು ಎಂದು ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.

ಮುಂಬೈ: ಶಿವಸೇನೆಯನ್ನು ವಾಸ್ತವಿಕವಾಗಿ 'ಗುಲಾಮರು' ಎಂದು ಪರಿಗಣಿಸಲಾಗಿದ್ದು, 2014ರಿಂದ 2019ರವರೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಅಧಿಕಾರದಲ್ಲಿದ್ದಾಗ ಶಿವಸೇನೆಯನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಲಾಯಿತು ಎಂದು ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.

ಉತ್ತರ ಮಹಾರಾಷ್ಟ್ರದ ಜಲ್ಗಾಂವ್‌ನಲ್ಲಿ ಶಿವಸೇನಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾವತ್, 'ಹಿಂದಿನ ಸರ್ಕಾರದಲ್ಲಿ ಶಿವಸೇನೆ ಎರಡನೇ ಸ್ಥಾನಮಾನದಲ್ಲಿದ್ದರೂ ಗುಲಾಮರಂತೆ ಪರಿಗಣಿಸಲ್ಪಟ್ಟಿತು. ಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ನಮ್ಮ ಪಕ್ಷವನ್ನು ಮುಗಿಸಲು ಪ್ರಯತ್ನಿಸಲಾಯಿತು ಎಂದು ಹೇಳಿದ್ದಾರೆ. 

ಶಿವಸೇನೆ ಅಧ್ಯಕ್ಷ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದು ಇದು ರಾಜ್ಯದಲ್ಲಿ ರಾಜಕೀಯ ಊಹಪೋಹಗಳಿಗೆ ಕಾರಣವಾಗಿತ್ತು. ಇದಾದ ಕೆಲ ದಿನಗಳಲ್ಲೇ ರಾವತ್ ಈ ಹೇಳಿಕೆ ನೀಡಿದ್ದಾರೆ.

ಸಿಎಂ ಯಾರಾಗಬೇಕೆಂಬ ವಿಚಾರವಾಗಿ 2019ರಲ್ಲಿ ಶಿವಸೇನೆ-ಬಿಜೆಪಿ ಮೈತ್ರಿ ಮುರಿದು ಬಿದ್ದಿತು. ಬಿಜೆಪಿಯ ಅತ್ಯಂತ ಹಳೆಯ ಮಿತ್ರಪಕ್ಷಗಳಲ್ಲಿ ಒಂದಾಗಿದ್ದ ಶಿವಸೇನಾ ನಂತರ ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ರಚಿಸಿ ಅಸಂಭವ ಮೈತ್ರಿ ಮಾಡಿಕೊಂಡಿತು.

ಶಿವಸೇನೆಯವರು ಮಹಾರಾಷ್ಟ್ರದ ಸಿಎಂ ಆಗಬೇಕು ಎಂದು ಕಾರ್ಯಕರ್ತರು ಭಾವಿಸಿದ್ದರು. ಶಿವ ಸೈನಿಕರಿಗೆ ಏನೂ ಸಿಗದಿದ್ದರೂ, ರಾಜ್ಯದ ನಾಯಕತ್ವ ಈಗ ಶಿವಸೇನೆಯ ಕೈಯಲ್ಲಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. ಈ ಕಾರಣಕ್ಕಾಗಿಯೇ(2019ರ ನವೆಂಬರ್‌ನಲ್ಲಿ) ಮಹಾ ವಿಕಾಸ್ ಅಘಾಡಿ ಸರ್ಕಾರ ರಚನೆಯಾಯಿತು ಎಂದು ರಾವತ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT