ಶಿರೋಮಣಿ ಅಕಾಲಿ ದಳ ಪ್ರತಿಭಟನೆ 
ದೇಶ

ಸಿಎಂ ಅಮರೀಂದರ್ ಸಿಂಗ್ ನಿವಾಸದ ಎದುರು ಪ್ರತಿಭಟನೆ: ಸುಖ್ಬೀರ್ ಸಿಂಗ್ ಬಾದಲ್ ಪೊಲೀಸ್ ವಶಕ್ಕೆ

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಶಿರೋಮಣಿ ಅಕಾಲಿ ದಳ, ಬಿಎಸ್ಪಿ ನಾಯಕರು ಮತ್ತು ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಮಂಗಳವಾರ ಜಲಫಿರಂಗಿಗಳನ್ನು ಬಳಸಿದ್ದಾರೆ.

ಮೊಹಾಲಿ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಶಿರೋಮಣಿ ಅಕಾಲಿ ದಳ, ಬಿಎಸ್ಪಿ ನಾಯಕರು ಮತ್ತು ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಮಂಗಳವಾರ ಜಲಫಿರಂಗಿಗಳನ್ನು ಬಳಸಿದ್ದಾರೆ.

ಕಾಂಗ್ರೆಸ್ ನೇತೃತ್ವದ ಸರ್ಕಾರ ಫತೇ ಕಿಟ್‌ಗಳ ಖರೀದಿಯಲ್ಲಿ ಅಕ್ರಮಗಳು ಮತ್ತು ಕೊರೋನಾ ಲಸಿಕೆ ಡೋಸ್ ಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಹಂಚಿಸಿದ್ದಾರೆ ಎಂಬ ಆರೋಪಿಸಿ ಎಸ್‌ಎಡಿ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. 

2022ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡ ಕೆಲ ದಿನಗಳ ಬಳಿಕ ಎಸ್‌ಎಡಿ ಮತ್ತು ಬಿಎಸ್‌ಪಿ ಜಂಟಿಯಾಗಿ ಮೊದಲ ಪ್ರತಿಭಟನೆ ನಡೆಸಿವೆ. ಪ್ರತಿಭಟನೆಯಲ್ಲಿ ಬಿಎಸ್ಪಿ ರಾಜ್ಯ ಅಧ್ಯಕ್ಷ ಜಸ್ಬೀರ್ ಸಿಂಗ್ ಗರ್ಹಿ ಕೂಡ ಉಪಸ್ಥಿತರಿದ್ದರು. ಇನ್ನು ಪ್ರತಿಭಟನಾ ನಿರತ ಬಾದಲ್ ಮತ್ತು ಬಿಕ್ರಮ್ ಸಿಂಗ್ ಮಜಿತಿಯಾ ಸೇರಿದಂತೆ ಹಲವಾರು ಅಕಾಲಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿಎಂ ನಿವಾಸದ ಮುಂದೆ ಹಾಕಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿಕೊಂಡು ಮುಂದೆ ಬಂದರು. ಇನ್ನು ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳ ಎರಡನೇ ಪದರವನ್ನು ದಾಟಲು ಪ್ರಯತ್ನಿಸಿದಾಗ ಪೊಲೀಸರು ಜಲಫಿರಂಗಿಗಳನ್ನು ಬಳಸಿದರು. ಸ್ಥಳದಲ್ಲಿ ಮೊಹಾಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸತಿಂದರ್ ಸಿಂಗ್ ಕೂಡ ಇದ್ದರು.

ಪ್ರತಿಭಟನೆಗೂ ಮುನ್ನ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಎಸ್‌ಎಡಿ ಮುಖ್ಯಸ್ಥ ಬಾದಲ್, ಫತೇ ಕಿಟ್‌ಗಳ ಖರೀದಿಯಲ್ಲಿನ ಅಕ್ರಮಗಳು ಮತ್ತು ಲಸಿಕೆ ಡೋಸ್ ಗಳನ್ನು ಖಾಸಗಿ ಆಸ್ಪತ್ರೆಗಳಿಗೆ ನೀಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

'ಫತೇಹ್ ಕಿಟ್' ನಲ್ಲಿ ಪಲ್ಸ್ ಆಕ್ಸಿಮೀಟರ್, ಥರ್ಮಾಮೀಟರ್, ಫೇಸ್ ಮಾಸ್ಕ್, ಸ್ಟೀಮರ್, ಸ್ಯಾನಿಟೈಸರ್, ವಿಟಮಿನ್-ಸಿ ಮಾತ್ರೆಗಳು ಮತ್ತು ಕೋವಿಡ್ ರೋಗಿಗಳಿಗೆ ಬೇಕಾಗುವ ಇತರ ಔಷಧಿಗಳಿರುತ್ತವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT