ದೇಶ

ಕ್ರಿಕೆಟಿಗ ಸುರೇಶ್ ರೈನಾ, ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಭೇಟಿ

Srinivas Rao BV

ಶ್ರೀನಗರ: ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಭೇಟಿ ಮಾಡಿದ್ದಾರೆ. 

ಭೇಟಿಯ ವೇಳೆ ಲೆಫ್ಟಿನೆಂಟ್ ಗವರ್ನರ್ ಗೆ ತಮ್ಮ "ಬಿಲೀವ್" ಪುಸ್ತಕವನ್ನು ನೀಡಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಯುವ ಕ್ರೀಡಾಪಟುಗಳ ಪ್ರತಿಭೆಯನ್ನು ಉತ್ತೇಜಿಸುವುದಕ್ಕೆ ತಾವು ದತ್ತು ತೆಗೆದುಕೊಂಡಿರುವ ಕ್ರಿಕೆಟ್ ಅಕಾಡೆಮಿಗಳು, ಶಾಲೆಗಳಲ್ಲಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 

ಜಮ್ಮು-ಕಾಶ್ಮೀರದಲ್ಲಿ ಕ್ರೀಡೆಯನ್ನು ಉತ್ತೇಜಿಸುವುದಕ್ಕಾಗಿ ತಮ್ಮ ಯೋಜನೆಗಳ ಬಗ್ಗೆ ರೈನಾ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ವಿವರಣೆ ನೀಡಿದ್ದು, ರೈನಾ ಕೆಲಸಗಳಿಗೆ ಲೆಫ್ಟಿನೆಂಟ್ ಗವರ್ನರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರೈನಾ ಅವರ ಯೋಜನೆಗಳಿಗೆ ಆಡಳಿತದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಮನೋಜ್ ಸಿನ್ಹಾ ಭರವಸೆ ನೀಡಿದ್ದಾರೆ.

SCROLL FOR NEXT