ವಿದ್ಯಾರ್ಥಿ ಹೋರಾಟಗಾರರಾದ ದೇವಾಂಗನಾ ಕಲಿತಾ (ಎಡಕ್ಕೆ) ಮತ್ತು ನತಾಶಾ 
ದೇಶ

ದೆಹಲಿ ಹಿಂಸಾಚಾರ: ವಿದ್ಯಾರ್ಥಿ ಹೋರಾಟಗಾರರಾದ ನತಾಶಾ, ದೇವಾಂಗನಾ, ಆಸಿಫ್ ಜಾಮೀನಿನ ಮೇಲೆ ಬಿಡುಗಡೆ

ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿ ಹೋರಾಟಗಾರರಾದ ನತಾಶಾ ನರ್ವಾಲ್, ದೇವಾಂಗನಾ ಕಲಿತಾ ಹಾಗೂ ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ, ಅವರೆಲ್ಲರೂ ಇಂದು ತಿಹಾರ್ ಜೈಲಿನಿಂದ  ಹೊರಗಡೆ ಬಂದಿದ್ದಾರೆ.

ನವದೆಹಲಿ: ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿ ಹೋರಾಟಗಾರರಾದ ನತಾಶಾ ನರ್ವಾಲ್, ದೇವಾಂಗನಾ ಕಲಿತಾ ಹಾಗೂ ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ, ಅವರೆಲ್ಲರೂ ಇಂದು ತಿಹಾರ್ ಜೈಲಿನಿಂದ  ಹೊರಗಡೆ ಬಂದಿದ್ದಾರೆ.

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಕಳೆದ ವರ್ಷ ಮೇ ತಿಂಗಳಲ್ಲಿ ಇವರನ್ನು ಬಂಧಿಸಲಾಗಿತ್ತು. ದೆಹಲಿ ಹೈಕೋರ್ಟ್ ಜಾಮೀನು ನೀಡಿದ ಎರಡು ದಿನಗಳ ನಂತರ ನ್ಯಾಯಾಲಯ ಈ ಆದೇಶ ನೀಡಿದೆ. ಮೂವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಮಹಾ ನಿರ್ದೇಶಕ ( ದೆಹಲಿ ಕಾರಾಗೃಹಗಳ) ಸಂದೀಪ್ ಗೋಯೆಲ್ ಖಚಿತಪಡಿಸಿದ್ದಾರೆ.  

ದೇವಾಂಗನಾ ಕಲಿತಾ ಮತ್ತು ನರ್ವಾಲ್ ಅವರನ್ನು ಸಂಜೆ 7 ಗಂಟೆ ಸುಮಾರಿನಲ್ಲಿ ಮತ್ತು ತನ್ಹಾ ಅವರನ್ನು 7-30ರ ಸುಮಾರಿನಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಹಿರಿಯ ಜೈಲು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ವಿಳಾಸ ಹಾಗೂ ಶ್ಯೂರಿಟಿಗಳ ಪರಿಶೀಲನೆ ವಿಳಂಬವಾಗಿದ್ದು ನಿಗದಿತ ವೇಳೆಯಲ್ಲಿ ಮೂವರು ವಿದ್ಯಾರ್ಥಿ ಹೋರಾಟಗಾರರನ್ನು ಜೈಲಿನಿಂದ ಬಿಡುಗಡೆ ಮಾಡಿರಲಿಲ್ಲ.

ಹೈಕೋರ್ಟ್ ನಿಂದ ಜಾಮೀನು ದೊರೆತ ನಂತರ ಕೂಡಲೇ ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಕೋರಿ ಹೋರಾಟಗಾರರು ವಿಚಾರಣಾ ನ್ಯಾಯಾಲಯದ ಮೊರೆ ಹೋಗಿದ್ದರು. ಅವರ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಗುರುವಾರ ಮುಂದೂಡಿತ್ತು. ನಂತರ ಅವರು ಹೈಕೋರ್ಟ್ ಗೆ ಹೋದಾಗ, ಕೆಳ ನ್ಯಾಯಾಲಯ ಈ ಸಮಸ್ಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿತು.

ಕಳೆದ ವರ್ಷ ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದಿಂದ 53 ಜನರು ಸಾವನ್ನಪ್ಪಿ, ಸುಮಾರು 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಈ ಗಲಭೆಯ ಮಾಸ್ಟರ್ ಮೈಂಡ್  ಎಂದು ಆರೋಪಿಸಿ ಮೇ 2020 ರಂದು ಈ ಮೂವರು ವಿದ್ಯಾರ್ಥಿ ಹೋರಾಟಗಾರರನ್ನು ಬಂಧಿಸಲಾಗಿತ್ತು. ಆದಾಗ್ಯೂ, ದೆಹಲಿ ಪೊಲೀಸರು ಈ ಪ್ರಕರಣದಲ್ಲಿ ಜಾಮೀನು ನೀಡಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ತೆರಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ