ದೇಶ

ಘಾಜಿಯಾಬಾದ್ ಹಲ್ಲೆ ಪ್ರಕರಣ: ಸ್ವರಾ ಭಾಸ್ಕರ್, ಟ್ವಿಟರ್ ಇಂಡಿಯಾ ಎಂಡಿ ವಿರುದ್ಧ ದೂರು ದಾಖಲು

Manjula VN

ನವದೆಹಲಿ: ಹಿರಿಯ ಮುಸ್ಲಿಂ ವ್ಯಕ್ತಿ ಮೇಲೆ ನಡೆದ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸ್ವರಾ ಭಾಸ್ಕರ್ ಹಾಗೂ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ದ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. 

ದೆಹಲಿಯ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಸ್ವರಾ ಭಾಸ್ಕರ್ ಹಾಗೂ ಮನೀಶ್ ಮಹೇಶ್ವರಿ ವಿರುದ್ಧ ದೂರು ದಾಖಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. 

ಆದರೆ. ಈ ಬಗ್ಗೆ ಯಾರು ದೂರು ನೀಡಿದ್ದಾರೆಂಬ ಕುರಿತ ಮಾಹಿತಿಗಳು ಬಹಿರಂಗವಾಗಿಲ್ಲ. ಜೂನ್​ 5ರಂದು ಅಬ್ದುಲ್​ ಸಮದ್​ ಎಂಬ ಹಿರಿಯ ವ್ಯಕ್ತಿ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ಮರಳುತ್ತಿದ್ದರು. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಅವರ ಮೇಲೆ ಕೆಲ ಕಿಡಿಗೇಡಿಗಳು ದಾಳಿ ನಡೆಸಿದ್ದರು. ಅವನ್ನು ಎಳೆದುಕೊಂಡ ಹತ್ತಿರದ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಕಿಡಿಗೇಡಿಗಳು ಅವರಿಗೆ ಜೈ ಶ್ರೀರಾಮ್​ , ವಂದೇ ಮಾತರಂ ಎಂದು ಘೋಷಣೆ ಕೂಗುತ್ತಾ ಹೊಡೆದಿದ್ದಾರೆ. ಅಲ್ಲದೇ ಮರದ ಕಟ್ಟಿಗೆಯಿಂದ ಮನಬಂದಂತೆ ಥಳಿಸಿದ್ದರೆಂದು ಹೇಳಲಾಗುತ್ತಿದೆ. 

ದಾಳಿಕೋರರ ಗುಂಪಿನಲ್ಲಿದ್ದ ಒಬ್ಬ ವ್ಯಕ್ತಿಯೊಬ್ಬ ಸಮದ್​​ ಅವರ ಗಡ್ಡ ಕತ್ತರಿಸುವ ಪ್ರಯತ್ನ ನಡೆಸಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಮದ್​, ತಮ್ಮನ್ನು ಬಿಟ್ಟು ಬಿಡುವಂತೆ ಯುವಕರಲ್ಲಿ ಪರಿಪರಿಯಾಗಿ ಬೇಡಿಕೊಂಡರೂ ಸಹ ಅವರನ್ನು ಹಿಂಸಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಈ ಎಲ್ಲಾ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿದೆ. ಇದರ ವಿಡಿಯಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಘಟನೆ ನಡೆದು 2 ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಘಾಜಿಯಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ. 

ವೃದ್ಧ ಅಬ್ದುಲ್ ಅವರು ಬುಲಂದ್ ಶೆಹರ್ ನಿವಾಸಿಯಾಗಿದ್ದು, ಎಫ್ಐಆರ್ ನಲ್ಲಿ ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುವಂತೆ ಬಲವಂತ ಮಾಡಿರುವ ಬಗ್ಗೆ ಹೇಳಿಕೆ ನೀಡಿಲ್ಲ ಎಂದು ತಿಳಿಸಿದ್ದಾರೆ. 

ಇನ್ನು ಪ್ರಕರಣ ಸಂಬಂಧ ಉತ್ತರಪ್ರದೇಶ ಪೊಲೀಸರು ಟ್ವಿಟರ್ ಇಂಕ್, ಟ್ವಿಟರ್ ಕಮ್ಯುನಿಕೇಷನ್ಸ್ ಇಂಡಿಯಾ, ನ್ಯೂಸ್ ಪೋರ್ಟಲ್ ದಿ ವೈರ್, ಲೇಖಕರಾದ ಮೊಹಮ್ಮದ್ ಜುಬೈರ್ ಮತ್ತು ರಾಣಾ ಅಯೂಬ್, ಹಿರಿಯ ಪತ್ರಕರ್ತ ಮತ್ತು ಲೇಖಕ ಸಬಾ ನಖ್ವಿ, ಕಾಂಗ್ರೆಸ್ ಮುಖಂಡರಾದ ಸಲ್ಮಾನ್ ನಿಜಾಮಿ, ಮಸ್ಕೂರ್ ಉಸ್ಮಾನಿ ಮತ್ತು ಸಾಮ ಮೊಹಮ್ಮದ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. 

SCROLL FOR NEXT