ದೇಶ

ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು 60,753 ಹೊಸ ಕೇಸ್ ಪತ್ತೆ; 1,647 ಮಂದಿ ಸಾವು

Manjula VN

ನವದೆಹಲಿ: ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆ ಕಂಡು ಬಂದಿದೆ. ಸಾವಿನ ಸಂಖ್ಯೆ 62 ದಿನದ ಕನಿಷ್ಟ ದಾಖಲಾಗಿದ್ದರೆ, 74 ದಿನಗಳ ಬಳಿಕ ಸಕ್ರಿಯ ಪ್ರಕರಣ ಸಂಖ್ಯೆ 8 ಲಕ್ಷಕ್ಕಿಂತ ಕೆಳಗೆ ಇಳಿದಿದೆ. 

ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 60,753 ಹೊಸ ಪ್ರಕರಣಗಳು ದಾಖಲಾಗಿವೆ. ಇನ್ನು ಇದೇ ಅವಧಿಯಲ್ಲಿ 1,647 ಮಂದಿ ಮೃತಪಟ್ಟಿದ್ದು, 62 ದಿನಗಳ ಕನಿಷ್ಟ ಎನಿಸಿಕೊಂಡಿದೆ.

ಇದೇ ವೇಳೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 74 ದಿನಗಳ ಬಳಿಕ 8 ಲಕ್ಷಕ್ಕಿಂತ ಕೆಳಗಿಳಿದಿದ್ದು. 7.60 ಲಕ್ಷಕ್ಕೆ ಇಳಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 97,743 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,86,78,390ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 19,02,009 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 38,92,07,637  ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 27,23,88,783 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

SCROLL FOR NEXT