ಲಸಿಕೆ ಪಡೆಯುತ್ತಿರುವ ಮಹಿಳೆ ಚಿತ್ರ 
ದೇಶ

ರಾಜ್ಯಗಳಲ್ಲಿ ಇನ್ನೂ 2.98 ಕೋಟಿ ಕೋವಿಡ್ ಲಸಿಕೆ ಡೋಸ್ ಲಭ್ಯ, ಈವರೆಗೆ 29 ಕೋಟಿ ಲಸಿಕೆ ಡೋಸ್ ಪೂರೈಕೆ: ಕೇಂದ್ರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ(2,98,77,936) ಕೋವಿಡ್ 19 ಲಸಿಕೆ ಡೋಸ್ ಲಭ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ತಿಳಿಸಿದೆ.

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ(2,98,77,936) ಕೋವಿಡ್ 19 ಲಸಿಕೆ ಡೋಸ್ ಲಭ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ತಿಳಿಸಿದೆ.

ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 2,310ಕ್ಕೂ ಹೆಚ್ಚಿನ ಲಸಿಕೆ ಪೂರೈಕೆಯಾಗಲಿದೆ ಎಂದು ಅದು ಹೇಳಿದೆ. ಈವರೆಗೆ ಕೇಂದ್ರವು ರಾಜ್ಯಗಳಿಗೆ 29.35 ಕೋಟಿ ಅಂದರೆ 29,35,04,820 ಪ್ರಮಾಣವನ್ನು ನೀಡಿದೆ. ಇದರಲ್ಲಿ, ವ್ಯರ್ಥವಾಗಿರುವುದು ಸೇರಿದಂತೆ ಒಟ್ಟು ಬಳಕೆ 26,36,26,884 ಡೋಸ್ ಗಳಾಗಿವೆ.

ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ನೀಡಿಕೆಯ ಭಾಗವಾಗಿ, ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಭಾರತ ಸರ್ಕಾರ ಬೆಂಬಲ ನೀಡುತ್ತಿದೆ. ಇದರ ಜೊತೆಗೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಲಸಿಕೆಗಳನ್ನು ನೇರವಾಗಿ ಖರೀದಿಸಲು ಸಹಕರಿಸುತ್ತಿದೆ. ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಮತ್ತು ನಿರ್ವಹಿಸಲು ವ್ಯಾಕ್ಸಿನೇಷನ್ ಭಾರತ ಸರ್ಕಾರದ ಸಮಗ್ರ ಕಾರ್ಯತಂತ್ರದ ಅವಿಭಾಜ್ಯ ಸ್ತಂಭವಾಗಿದೆ, ಜೊತೆಗೆ ಟೆಸ್ಟ್, ಟ್ರ್ಯಾಕ್, ಟ್ರೀಟ್ ನಿಯಮ ಅನುಸರಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ ಭಾರತವು 53,256 ಹೊಸ ಕೋವಿಡ್-19 ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು ಸಂಖ್ಯೆ 2,99,35,221 ಕ್ಕೆ ಹೆಚ್ಚಳವಾಗಿದ್ದು, 1,422 ಹೊಸ ಸಾವುಗಳೊಂದಿಗೆ ಸಾವಿನ ಒಟ್ಟು ಸಂಖ್ಯೆ 3,88,135ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಈ ವರ್ಷದ ಜನವರಿ 16ರಿಂದ ಒಟ್ಟು 28,00,36,898 ಡೋಸ್‌ಗಳನ್ನು ನೀಡಲಾಗಿದ್ದು, ಕಳೆದ 24 ಗಂಟೆಗಳಲ್ಲಿ 30,39,996 ಡೋಸ್‌ಗಳನ್ನು ನೀಡಲಾಗಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ