7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 
ದೇಶ

ಇಂದು ಇಡೀ ಜಗತ್ತು ಕೋವಿಡ್ ವಿರುದ್ಧ ಹೋರಾಡುತ್ತಿರುವಾಗ ಯೋಗ ಭರವಸೆಯ ಆಶಾಕಿರಣವಾಗಿದೆ: ಪ್ರಧಾನಿ ಮೋದಿ 

ಇಂದು ಇಡೀ ಜಗತ್ತು ಕೋವಿಡ್-19 ಮಹಾಮಾರಿ ಸಾಂಕ್ರಾಮಿಕ ವಿರುದ್ಧ ಹೋರಾಡುತ್ತಿರುವಾಗ ಯೋಗ ನಮ್ಮ ಜೀವನದಲ್ಲಿ ಭರವಸೆಯ ಆಶಾಕಿರಣವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ 7ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. 

ನವದೆಹಲಿ: ಇಂದು ಇಡೀ ಜಗತ್ತು ಕೋವಿಡ್-19 ಮಹಾಮಾರಿ ಸಾಂಕ್ರಾಮಿಕ ವಿರುದ್ಧ ಹೋರಾಡುತ್ತಿರುವಾಗ ಯೋಗ ನಮ್ಮ ಜೀವನದಲ್ಲಿ ಭರವಸೆಯ ಆಶಾಕಿರಣವಾಗಿದೆ. ಕಳೆದ ಎರಡು ವರ್ಷಗಳಿಂದ ಈಗ ಭಾರತದಲ್ಲಿ ಅಥವಾ ಬೇರೆ ರಾಷ್ಟ್ರಗಳಲ್ಲಿ ಕೊರೋನಾದಿಂದಾಗಿ ಯಾವುದೇ ಸಾರ್ವಜನಿಕ ಸಭೆ, ಸಮಾರಂಭ-ಕಾರ್ಯಕ್ರಮಗಳು ನಡೆದಿಲ್ಲ. ಆದರೆ ಜನರಲ್ಲಿ ಯೋಗದ ಬಗ್ಗೆ ಇರುವ ಉತ್ಸಾಹ ಕಡಿಮೆಯಾಗಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ಇಂದು 7ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಉದ್ದೇಶಿಸಿ ಮಾತನಾಡಿ, ಈ ವರ್ಷದ ಯೋಗ ದಿನದ ಧ್ಯೇಯವಾಕ್ಯ 'ಸ್ವಾಸ್ಥ್ಯಕ್ಕಾಗಿ ಯೋಗ' ಎಂಬುದಾಗಿದೆ. ಇತ್ತೀಚಿನ ಪರಿಸ್ಥಿತಿ, ಆರೋಗ್ಯದ ಸ್ಥಿತಿಗತಿಯಿಂದಾಗಿ ಹೆಚ್ಚೆಚ್ಚು ಮಂದಿ ಯೋಗ ಮಾಡುವಂತೆ ಜನರನ್ನು ಪ್ರೇರೇಪಿಸುತ್ತದೆ. ಪ್ರತಿ ದೇಶಗಳು, ಪ್ರತಿ ಪ್ರದೇಶಗಳು, ಜನರು ಆರೋಗ್ಯಯುತವಾಗಿ ಬಾಳಲಿ ಎಂದು ನಾನು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ಕೇಳಿಕೊಳ್ಳುತ್ತೇನೆ ಎಂದರು.

ಇಂದು ವೈದ್ಯಕೀಯ ವಿಜ್ಞಾನವು ವೈದ್ಯಕೀಯ ಚಿಕಿತ್ಸೆಯ ಜೊತೆಗೆ ಗುಣಪಡಿಸುವ ಪ್ರಕ್ರಿಯೆಗೆ ಒತ್ತು ನೀಡುತ್ತದೆ. ಗುಣಪಡಿಸುವ ಪ್ರಕ್ರಿಯೆಯಲ್ಲಿ ಯೋಗ ಸಹಾಯ ಮಾಡುತ್ತದೆ. ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಯೋಗವನ್ನು ರಕ್ಷಾಕವಚವಾಗಿ ಬಳಸಿದ್ದಾರೆ. ಕೊರೋನಾ ಚಿಕಿತ್ಸೆಯ ಮಧ್ಯೆ ಇಂದು ಆಸ್ಪತ್ರೆಗಳಲ್ಲಿ ವೈದ್ಯರು, ದಾದಿಯರು ಯೋಗವನ್ನು ಕಲಿಸುತ್ತಾ ಅನುಲೋಮ-ವಿಲೋಮ, ಪ್ರಾಣಾಯಾಮದಂತಹ ಉಸಿರಾಟದ ವ್ಯಾಯಾಮ ಮಾಡಿಸುತ್ತಿದ್ದಾರೆ. ಈ ವ್ಯಾಯಾಮಗಳು ಉಸಿರಾಟದ ವ್ಯವಸ್ಥೆಯನ್ನು ಬಲಪಡಿಸುತ್ತವೆ ಎಂದು ಅಂತರರಾಷ್ಟ್ರೀಯ ತಜ್ಞರು ಹೇಳಿದ್ದಾರೆ ಎಂದು ಪ್ರಧಾನಿ ಇಂದು ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆಯ ಸಹಯೋಗದೊಂದಿಗೆ ಭಾರತ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಈಗ ಎಂ-ಯೋಗ ಅಪ್ಲಿಕೇಶನ್ ಲಭ್ಯವಿದ್ದು, ಇದು ವಿಶ್ವದಾದ್ಯಂತ ಜನರಿಗೆ ವಿವಿಧ ಭಾಷೆಗಳಲ್ಲಿ ಯೋಗ ತರಬೇತಿ ವೀಡಿಯೊಗಳನ್ನು ಹೊಂದಿರುತ್ತದೆ. ಇದು 'ಒಂದು ವಿಶ್ವ, ಒಂದು ಆರೋಗ್ಯ' ಧ್ಯೇಯವಾಕ್ಯದಲ್ಲಿ ನಮಗೆ ಸಹಾಯ ಮಾಡುತ್ತದೆ ಎಂದರು.

ಇಂದಿನ ಯೋಗ ದಿನದ ಪ್ರಧಾನಿ ಭಾಷಣದ ಮುಖ್ಯಾಂಶಗಳು: -ಜಗತ್ತಿನಲ್ಲಿ ಕೋವಿಡ್ ಸೋಂಕು ಪರಿಚಯವಾದಾಗ ಯಾವುದೇ ದೇಶ ಸಿದ್ಧವಾಗಿರಿಲಿಲ್ಲ. ಆದರೆ ಈ ವೈರಸ್ ವಿರುದ್ಧ ನಾವು ಹೋರಾಡಬಹುದು ಎಂದು ಅರಿತುಕೊಳ್ಳಲು ಯೋಗವು ನಮಗೆ ಸಹಾಯ ಮಾಡಿತು.

-ಯೋಗವು ದೈಹಿಕ ಮತ್ತು ಮಾನಸಿಕ ಸವಾಲುಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ. ಸವಾಲಿನ ಕಾಲದಲ್ಲಿ ಒಬ್ಬರು ಹೇಗೆ ಬದುಕಬಹುದು ಎಂಬುದನ್ನು ಇದು ತೋರಿಸುತ್ತದೆ.

-ಈ ವರ್ಷದ ಧ್ಯೇಯವಾಕ್ಯ Yoga For Wellness, ಇದು ದೈಹಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಯೋಗವನ್ನು ಅಭ್ಯಾಸ ಮಾಡುವುದರ ಮೇಲೆ ಕೇಂದ್ರೀಕರಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!