ಕೋವಿಡ್-19 ವೈರಸ್ 
ದೇಶ

ಭಾರತದಲ್ಲಿ ಇದುವರೆಗೆ 22 ಡೆಲ್ಟಾ ಪ್ಲಸ್ ರೂಪಾಂತರಿ ಪತ್ತೆ; ಇದರ ಬಗ್ಗೆ ಈಗಲೇ ಆತಂಕ ಬೇಡ: ಕೇಂದ್ರ

ದೇಶದಲ್ಲಿ ಇದುವರೆಗೆ 22 ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ಈ ರೂಪಾಂತರಿ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ನವದೆಹಲಿ: ದೇಶದಲ್ಲಿ ಇದುವರೆಗೆ 22 ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ಈ ರೂಪಾಂತರಿ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಒಟ್ಟಾರೆ ಪತ್ತೆಯಾಗಿರುವ 22 ರೂಪಾಂತರಿ ಡೆಲ್ಟಾ ಪ್ಲಸ್ ಪ್ರಕರಣಗಳ ಪೈಕಿ 16 ಪ್ರಕರಣಗಳು ಮಹಾರಾಷ್ಟ್ರದ ರತ್ನಾಗಿರಿ ಮತ್ತು ಜಲ್ಗಾಂವ್ ನಲ್ಲಿ ಪತ್ತೆಯಾಗಿವೆ. ಇನ್ನುಳಿದ ಪ್ರಕರಣಗಳು ಮಧ್ಯಪ್ರದೇಶ ಮತ್ತು ಕೇರಳದಲ್ಲಿ ವರದಿಯಾಗಿದೆ ಎಂದು ಸರ್ಕಾರ ತಿಳಿಸಿದೆ.

ಕೋವಿಡ್ -19 ರ 'ಡೆಲ್ಟಾ-ಪ್ಲಸ್' ರೂಪಾಂತರಿಯನ್ನು ವಿಶ್ವ ಆರೋಗ್ಯ ಸಂಸ್ಥೆ 'ಕರಿಯಂಟ್ ಆಫ್ ಕನ್ಸರ್ನ್' ಎಂದು ವರ್ಗೀಕರಿಸಿದೆ. ಡೆಲ್ಟಾ-ಪ್ಲಸ್ 'ಡೆಲ್ಟಾ' ರೂಪಾಂತರದ ಸ್ವರೂಪವಾಗಿದ್ದು  ಇದು ದೇಶದಲ್ಲಿ ಎರಡನೇ ಕೊರೋನಾ ಅಲೆಗೆ ಕಾರಣವಾಗಿತ್ತು.

ಭಾರತದಲ್ಲಿ ಕೊರೋನಾ 2ನೇ ಅಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 42,640 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದು ಕಳೆದ 91 ದಿನದಲ್ಲೇ ದೃಢಪಟ್ಟ ಕನಿಷ್ಠ ಸಂಖ್ಯೆಯಾಗಿದೆ. ಇನ್ನು ಇದೇ ಅವಧಿಯಲ್ಲಿ 1,167 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT