ದೇಶ

ಕೋವಿಡ್-19: ಭಾರತದಲ್ಲಿಂದು 50,848 ಹೊಸ ಕೇಸ್ ಪತ್ತೆ; 1,358 ಮಂದಿ ಸಾವು

Manjula VN

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 50,848 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,358 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ. 

ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,00,28,709ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,90,660ಕ್ಕೆ ಏರಿಕೆಯಾಗಿದೆ. 

ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 6,43,194ಕ್ಕೆ ಕುಸಿದ್ದು, ಹಲವು ದಿನಗಳ ಬಳಿಕ ದೇಶದಲ್ಲಿ ದಾಖಲಾಗಿರುವ ಅತೀ ಕನಿಷ್ಠ ಸಕ್ರಿಯ ಸೋಂಕಿತರ ಸಂಖ್ಯೆ ಇದಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 68,817 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,89,94,855ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 19,01,056 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 39,59,73,198 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 28,87,66,201 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

SCROLL FOR NEXT