ಪ್ರಧಾನಿ ನರೇಂದ್ರ ಮೋದಿ 
ದೇಶ

ಒಲಿಂಪಿಕ್ ದಿನ: ಭಾರತೀಯ ಅಥ್ಲಿಟ್ ಗಳಿಗೆ ಪ್ರಧಾನಿ ಮೋದಿ ಶುಭಾಶಯ 

ಜೂನ್ 23, ಒಲಿಂಪಿಕ್ ದಿನ. ಒಲಿಂಪಿಕ್ ಆರಂಭವಾದಲ್ಲಿಂದ ಇಲ್ಲಿಯವರೆಗೆ ಸಾಕಷ್ಟು ಮಂದಿ ಭಾರತೀಯ ಕ್ರೀಡಾಪಟುಗಳು ದೇಶವನ್ನು ಪ್ರತಿನಿಧಿಸಿದ್ದಾರೆ.

ನವದೆಹಲಿ: ಜೂನ್ 23, ಒಲಿಂಪಿಕ್ ದಿನ. ಒಲಿಂಪಿಕ್ ಆರಂಭವಾದಲ್ಲಿಂದ ಇಲ್ಲಿಯವರೆಗೆ ಸಾಕಷ್ಟು ಮಂದಿ ಭಾರತೀಯ ಕ್ರೀಡಾಪಟುಗಳು ದೇಶವನ್ನು ಪ್ರತಿನಿಧಿಸಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿರುವ ಒಲಿಂಪಿಕ್ ಪಂದ್ಯ ಇನ್ನು ಸ್ವಲ್ಪ ದಿನಗಳಲ್ಲಿ ಆರಂಭವಾಗಲಿದೆ. ಟೋಕ್ಯೋ 2020 ಇನ್ನು ಕೆಲ ವಾರಗಳಲ್ಲಿ ಆರಂಭವಾಗಲಿದ್ದು ಈ ಸಂದರ್ಭದಲ್ಲಿ ಪಂದ್ಯದಲ್ಲಿ ಭಾಗವಹಿಸುತ್ತಿರುವ ನಮ್ಮ ದೇಶದ, ಏಷ್ಯಾ ಖಂಡದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ಒಲಿಂಪಿಕ್ ದಿನದ ಶುಭಾಶಯ ತಿಳಿಸಿರುವ ಅವರು, ಭಾರತದ ಪರವಾಗಿ ಇದುವರೆಗಿನ ಒಲಿಂಪಿಕ್ ಪಂದ್ಯಗಳಲ್ಲಿ ಭಾಗವಹಿಸಿದವರಿಗೆ ಶುಭಾಶಯಗಳು. ಅವರ ಪ್ರಯತ್ನ, ಕೊಡುಗೆಗಳನ್ನು ನಮ್ಮ ದೇಶ ಹೆಮ್ಮೆಯಿಂದ ಹೇಳಿಕೊಳ್ಳುತ್ತದೆ, ಇತರ ಅಥ್ಲಿಟ್ ಗಳಿಗೆ ಅವರು ಮಾದರಿ ಎಂದು ಹೇಳಿದ್ದಾರೆ.

ಒಲಿಂಪಿಕ್ ಕ್ರೀಡಾಕೂಟ: ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲು ಮತ್ತು ಈ ಸಂದರ್ಭದಲ್ಲಿ ನಡೆಯುವ ಕ್ರೀಡೆಗಳ ಸಂಖ್ಯೆಯ ಬಗ್ಗೆ ಜಾಗೃತಿ ಮೂಡಿಸಲು ಜೂನ್ 23 ರಂದು ಒಲಿಂಪಿಕ್ ದಿನ ಆಚರಿಸಲಾಗುತ್ತದೆ. ಒಲಿಂಪಿಕ್ಸ್ ಒಂದು ಪ್ರಮುಖ ಅಂತರರಾಷ್ಟ್ರೀಯ ಕ್ರೀಡಾಕೂಟವಾಗಿದ್ದು, ವಿಶ್ವದಾದ್ಯಂತದ ಸಾವಿರಾರು ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾರೆ. ಆಧುನಿಕ ಒಲಿಂಪಿಕ್ ಆಟಗಳು ಕ್ರಿ.ಪೂ 8 ನೇ ಶತಮಾನ ಮತ್ತು ಕ್ರಿ.ಶ 4 ನೇ ಶತಮಾನದ ನಡುವೆ ಗ್ರೀಸ್‌ನ ಒಲಿಂಪಿಯಾದಲ್ಲಿ ನಡೆದ ಪ್ರಾಚೀನ ಒಲಿಂಪಿಕ್ ಕ್ರೀಡಾಕೂಟದಿಂದ ಪ್ರೇರಿತವಾಗಿವೆ.

ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅನ್ನು 1894 ರಲ್ಲಿ ಬ್ಯಾರನ್ ಪಿಯರೆ ಡಿ ಕೂಬರ್ಟಿನ್ ಕಂಡುಹಿಡಿದನು ಮತ್ತು ಮೊದಲ ಆಧುನಿಕ ಒಲಿಂಪಿಕ್ ಕ್ರೀಡಾಕೂಟವನ್ನು 1896 ರಲ್ಲಿ ಅಥೆನ್ಸ್‌ನಲ್ಲಿ ನಡೆಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT