ದೇಶ

ಭಾರತದಲ್ಲಿ ಏರಿಳಿಯುತ್ತಿರುವ ಕೊರೋನಾ; ದೇಶದಲ್ಲಿಂದು 54,069 ಹೊಸ ಕೇಸ್ ಪತ್ತೆ; 1,321 ಮಂದಿ ಸಾವು

Manjula VN

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಯುತ್ತಿದ್ದು, ದೇಶದಲ್ಲಿ ಗುರುವಾರ 54,069 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ ಗಡಿ ದಾಟಿ 3,00,82,778ಕ್ಕೆ ತಲುಪಿದೆ. ಗಮನಾರ್ಹ ವಿಚಾರವೆಂದರೆ ಕಳೆದ 51 ದಿನಗಳಲ್ಲಿ ದೇಶದಲ್ಲಿ 1 ಕೋಟಿಗೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 

ಇನ್ನು ಕಳೆದ ಗಂಟೆಗಳ ಅವಧಿಯಲ್ಲಿ 1,321 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಬಲಿಯಾದವರ ಸಂಖ್ಯೆ 3,91,981ಕ್ಕೆ ಏರಿಕೆಯಾಗಿದೆ. 

ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ  6,27,057ಕ್ಕೆ ಕುಸಿದ್ದು, ಹಲವು ದಿನಗಳ ಬಳಿಕ ದೇಶದಲ್ಲಿ ದಾಖಲಾಗಿರುವ ಅತೀ ಕನಿಷ್ಠ ಸಕ್ರಿಯ ಸೋಂಕಿತರ ಸಂಖ್ಯೆ ಇದಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 68,885 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,90,63,740ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 18,59,469 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು,  39,78,32,667 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 30,16,26,028 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

SCROLL FOR NEXT