ಸಾಂದರ್ಭಿಕ ಚಿತ್ರ 
ದೇಶ

ಪಾರದರ್ಶಕವಾಗಿ ರಾಜ್ಯವ್ಯಾಪಿ ಲಸಿಕೆ ವಿತರಣೆ; ಮಾಧ್ಯಮಗಳ ಆರೋಪ ನಿರಾಧಾರ: ಕೇಂದ್ರ ಸರ್ಕಾರ

ರಾಜ್ಯಗಳಿಗೆ ಪಾರದರ್ಶಕವಾಗಿ ಕೋವಿಡ್ ಲಸಿಕೆಗಳನ್ನು ವಿತರಣೆ ಮಾಡಿಲ್ಲ ಎಂಬ ಮಾಧ್ಯಮಗಳ ಆರೋಪವನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.

ನವದೆಹಲಿ: ರಾಜ್ಯಗಳಿಗೆ ಪಾರದರ್ಶಕವಾಗಿ ಕೋವಿಡ್ ಲಸಿಕೆಗಳನ್ನು ವಿತರಣೆ ಮಾಡಿಲ್ಲ ಎಂಬ ಮಾಧ್ಯಮಗಳ ಆರೋಪವನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರ, ರಾಜ್ಯಗಳ ಜನಸಂಖ್ಯೆ, ಪ್ರಕರಣಗಳ ಸಂಖ್ಯೆ, ಬಳಕೆಯ ದಕ್ಷತೆ ಮತ್ತು ವ್ಯರ್ಥ ಅಂಶಗಳ ಆಧಾರದ ಮೇಲೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ರಾಜ್ಯಗಳಿಗೆ ಪಾರದರ್ಶಕವಾಗಿ ಕೋವಿಡ್ ಲಸಿಕೆ ವಿತರಣೆ ಮಾಡಿಲ್ಲ ಎಂಬ ಕೆಲ ಮಾಧ್ಯಮಗಳ ಆರೋಪ ಸಂಪೂರ್ಣವಾಗಿ ಆಧಾರ ರಹಿತವಾಗಿದ್ದು, ಪೂರ್ಣ ಮಾಹಿತಿ ಇಲ್ಲ ಎಂದು ಸಚಿವಾಲಯ ತಿಳಿಸಿದೆ.

ಕೇಂದ್ರ ಸರ್ಕಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪಾರದರ್ಶಕ ರೀತಿಯಲ್ಲಿ ಕೋವಿಡ್-19 ಲಸಿಕೆ ವಿತರಣೆ ಮಾಡಿದೆ ಎಂದು ಸ್ಪಷ್ಟಪಡಿಸಿರುವ ಸಚಿವಾಲಯ, ವೈಜ್ಞಾನಿಕತೆ ಮತ್ತು ಸಾಂಕ್ರಾಮಿಕ ಘಟನೆ, ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಆಧಾರದ ಮೇಲೆ ರಾಷ್ಟ್ರೀಯ ಕೋವಿಡ್ ಲಸಿಕೆ ಅಭಿಯಾನವನ್ನು  ರೂಪಿಸಲಾಗಿದೆ ಎಂದು ಹೇಳಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪರಿಣಾಮಕಾರಿ ಸಹಭಾಗಿತ್ವ ಮತ್ತು ಹೆಚ್ಚಿನ ಸಂಖ್ಯೆಯ ಜನರೊಂದಿಗೆ ಪರಿಣಾಮಕಾರಿಯಾಗಿ ಲಸಿಕೆ ಅಭಿಯಾನವನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT