ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಜ್ಯಗಳ ಬಳಿ ಬಳಕೆಯಾಗದ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಬಳಕೆಯಾಗದ 1.5 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

ಸಂಗ್ರಹ ಚಿತ್ರ
Manjula VN
Updated On : 25 Jun 2021, 1:18 pm

ನವದೆಹಲಿ: ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಬಳಕೆಯಾಗದ 1.5 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ. 

ಈವರೆಗೆ ಕೇಂದ್ರವು ರಾಜ್ಯಗಳಿಗೆ 30.54 ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳಿಗೆ 47 ಲಕ್ಷ ಡೋಸ್ ಲಸಿಕೆಗಳನ್ನು ವಿತರಿಸಲಾಗುತ್ತದೆ. ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 1,50,28,186 ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ. 

ಶುಕ್ರವಾರ ಲಭ್ಯವಿರುವ ಮಾಹಿತಿಯ ಪ್ರಕಾರ, ತ್ಯಾಜ್ಯಗಳು ಸೇರಿದಂತೆ ಒಟ್ಟು 29,04,04,264 ಪ್ರಮಾಣದಷ್ಟು ಬಳಕೆಯಾಗಿದೆ. ಎಂದು ತಿಳಿಸಿದೆ. 

Advertisement

Advertisement

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 30,79,48,744 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments