ಪೊಲೀಸರ ವಶದಲ್ಲಿರುವ ಬ್ಯಾಂಕ್ ಭದ್ರತಾ ಸಿಬ್ಬಂದಿ 
ದೇಶ

ಯುಪಿ: ಮಾಸ್ಕ್ ಧರಿಸದಿದ್ದಕ್ಕೆ ಮಾತಿನ ಚಕಮಕಿ, ಬ್ಯಾಂಕಿನ ಒಳಗಡೆ ಗುಂಡು ಹಾರಿಸಿದ ಭದ್ರತಾ ಸಿಬ್ಬಂದಿ!

ಮಾಸ್ಕ್ ಧರಿಸದಿದ್ದಕ್ಕೆ ಮಾತಿನ ಚಕಮಕಿ ನಡೆದ ನಂತರ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬರು, ಗ್ರಾಹಕರೊಬ್ಬರ ಮೇಲೆ  ಬ್ಯಾಂಕಿನ ಒಳಗಡೆಯೇ ಗುಂಡು ಹಾರಿಸಿ ಗಾಯಗೊಳಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

ಲಖನೌ: ಮಾಸ್ಕ್ ಧರಿಸದಿದ್ದಕ್ಕೆ ಮಾತಿನ ಚಕಮಕಿ ನಡೆದ ನಂತರ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬರು, ಗ್ರಾಹಕರೊಬ್ಬರ ಮೇಲೆ  ಬ್ಯಾಂಕಿನ ಒಳಗಡೆಯೇ ಗುಂಡು ಹಾರಿಸಿ ಗಾಯಗೊಳಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಇಂದು ಈ ಘಟನೆ ನಡೆದಿದ್ದು, ಗಾಯಾಳುವನ್ನು ರೈಲ್ವೆ ನೌಕರ ರಾಜೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಭದ್ರತಾ ಸಿಬ್ಬಂದಿಯನ್ನು  ಉತ್ತರ ಪ್ರದೇಶ ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಕುಮಾರ್ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ಮಾಸ್ಕ್ ಧರಿಸದೆ ಬ್ಯಾಂಕಿನೊಳಗಡೆ ಬರುತ್ತಿದ್ದ ಗ್ರಾಹಕನನ್ನು ತಡೆದಾಗ ಇಬ್ಬರ ನಡುವೆ ಜಗಳ ನಡೆದು ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದಾಗಿ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಮಾಸ್ಕ್ ಧರಿಸದಿರುವುದಕ್ಕೆ ಜಗಳ ಆರಂಭವಾಯಿತು. ತದನಂತರ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿರುವುದಾಗಿ  ಕುಮಾರ್ ಅವರ ಸಂಬಂಧಿಕರು ತಿಳಿಸಿದ್ದಾರೆ. ಈ ಸಂಬಂಧ ವಿಚಾರಣೆ ನಡೆಯುತ್ತಿರುವುದಾಗಿ ಬರೇಲಿ ಪೊಲೀಸ್ ಮುಖ್ಯಸ್ಥ ರೋಹಿತ್ ಸಿಂಗ್ ಸಜ್ವಾನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!