ಮಿಮಿ ಚಕ್ರವರ್ತಿ 
ದೇಶ

ನಕಲಿ ಕೋವಿಡ್ ಲಸಿಕೆ ಪಡೆದಿದ್ದ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿಗೆ ಅನಾರೋಗ್ಯ!

ನಕಲಿ ಕೋವಿಡ್ ಲಸಿಕೆ ಪಡೆದ ಕೆಲವೇ ದಿನಗಳಲ್ಲಿ ನಟಿ ಕಮ್ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಕೋಲ್ಕತಾ: ನಕಲಿ ಕೋವಿಡ್ ಲಸಿಕೆ ಪಡೆದ ಕೆಲವೇ ದಿನಗಳಲ್ಲಿ ನಟಿ ಕಮ್ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಜಾದವ್‌ಪುರ ಸಂಸದೆ ಹಾಜರಾದ ವೈದ್ಯರು, ನಾಲ್ಕು ದಿನಗಳ ಹಿಂದೆ ತೆಗೆದುಕೊಂಡ ನಕಲಿ ಡೋಸ್ ಅನಾರೋಗ್ಯಕ್ಕೆ ಕಾರಣ ಎಂದು ಇಷ್ಟು ಬೇಗ ಹೇಳಲು ಸಾಧ್ಯವಿಲ್ಲ. ಚಕ್ರವರ್ತಿ ಬೆಳಿಗ್ಗೆ ತನ್ನ ನಿವಾಸದಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಕೂಡಲೇ ಅವರ ಮನೆ ಕೆಲಸದವರು ಕುಟುಂಬದ ವೈದ್ಯರನ್ನು ಕರೆಸಲಾಯಿತು ಎಂದು ನಟಿಯ ಆಪ್ತ ಮೂಲಗಳು ತಿಳಿಸಿವೆ.

ಪಿತ್ತಕೋಶ ಮತ್ತು ಪಿತ್ತಜನಕಾಂಗಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನಟಿ ಬಳಲುತ್ತಿದ್ದಾರೆ. ನಿರ್ಜಲೀಕರಣ, ಹೊಟ್ಟೆ ನೋವು ಮತ್ತು ರಕ್ತದೊತ್ತಡದಲ್ಲಿ ಏರಿಳಿಕೆಯಾಗುತ್ತಿದೆ ಎಂದು ಅವರು ಹೇಳಿದರು.

ಸದ್ಯ ಮಿಮಿ ಚಕ್ರವರ್ತಿಯ ಸ್ಥಿತಿ ಸ್ಥಿರವಾಗಿದೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಅವರ ಅನಾರೋಗ್ಯಕ್ಕೆ ನಕಲಿ ಲಸಿಕೆ ಕಾರಣ ಎಂದು ತಕ್ಷಣವೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ವೈದ್ಯರು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ. 

ಕೋಲ್ಕತ್ತಾದಲ್ಲಿ ನಾಗರಿಕ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೋರ್ವ ಲಸಿಕೆ ಅಭಿಯಾನವನ್ನು ಆಯೋಜಿಸಿದ್ದು ಅದರಲ್ಲಿ ಮಿಮಿ ಚಕ್ರವರ್ತಿಗೆ ಲಸಿಕೆ ನೀಡಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಜರಾತ್: SIR ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ, 73.73 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!

5ನೇ T20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 30 ರನ್ ಗಳ ರೋಚಕ ಜಯ; 3-1 ಸರಣಿ ಗೆಲುವು

Load shedding In bangalore: ಡಿ.20 ರಂದು ನಗರದ ಈ ಏರಿಯಾಗಳಲ್ಲಿ ಬೆಳಿಗ್ಗೆಯಿಂದ ಸಂಜೆ ವರೆಗೂ ವಿದ್ಯುತ್ ಕಡಿತ

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ: ಡಿ.ಕೆ ಶಿವಕುಮಾರ್

1,000 ಕೋಟಿ ಬೆಟ್ಟಿಂಗ್ ಆ್ಯಪ್ ತನಿಖೆ: ಯುವರಾಜ್ ಸಿಂಗ್, ಉತ್ತಪ್ಪ, ಮಿಮಿ ಚಕ್ರವರ್ತಿ, ಸೋನು ಸೂದ್ ಆಸ್ತಿ ಮುಟ್ಟುಗೋಲು!

SCROLL FOR NEXT