ಅನಿಲ್ ದೇಶ್ ಮುಖ್ 
ದೇಶ

ಅಕ್ರಮ ಹಣ ವರ್ಗಾವಣೆ ಕೇಸು: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಇಡಿ ಸಮನ್ಸ್

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ತನಿಖೆ ನಡೆಸಲು ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ತನಿಖೆ ನಡೆಸಲು ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಬಹುಕೋಟಿ ವಂಚನೆ ಮತ್ತು ಹಣ ದಂಧೆ ಪ್ರಕರಣ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್ ನಲ್ಲಿ ಅನಿಲ್ ದೇಶ್ ಮುಖ್ ಅವರು ಗೃಹಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ಬೆಳಗ್ಗೆ 11 ಗಂಟೆಯ ಹೊತ್ತಿಗೆ ಜಾರಿ ನಿರ್ದೇಶನಾಲಯ ಮುಂದೆ ಹಾಜರಾಗಲು ತನಿಖಾಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.

ನಿನ್ನೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ದೇಶ್ ಮುಖ್ ಅವರ ಖಾಸಗಿ ಕಾರ್ಯದರ್ಶಿ ಸಂಜೀವ್ ಪಲಂಡೆ ಮತ್ತು ಖಾಸಗಿ ಸಹಾಯಕ ಕುಂದನ್ ಶಿಂಧೆಯನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಇದಕ್ಕೂ ಮೊದಲು ಮುಂಬೈ ಮತ್ತು ನಾಗ್ಪುರದಲ್ಲಿರುವ ಅನಿಲ್ ದೇಶ್ ಮುಖ್ ನಿವಾಸಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಚುನಾವಣೆ ಘೋಷಣೆಯಾದ್ರೆ 25 ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಹೊಸ ಬಾಂಬ್‌

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...

ರಸ್ತೆ ಮಧ್ಯೆ ನಮಾಜ್ ಮಾಡುತ್ತಿದ್ದ ಪಾಕ್‌ ಮೂಲದ ವಿದ್ಯಾರ್ಥಿನಿಗೆ ಕಾರು ಢಿಕ್ಕಿ, ಸಾವು; ಚಾಲಕನಿಗೆ ಜೈಲು ಶಿಕ್ಷೆ ವಿನಾಯಿತಿ!