ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ಅನಿಲ್ ದೇಶ್ ಮುಖ್ ರವರ ಇಬ್ಬರು ಆಪ್ತರ ಬಂಧನ

Shilpa D

ಮುಂಬಯಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್ ಅವರ ಇಬ್ಬರು ಆಪ್ತರನ್ನ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ. 

ದೇಶಮುಖ್ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಪಲಾಂಡೆ ಮತ್ತು ಆಪ್ತ ಸಹಾಯಕ ಕುಂದನ್ ಶಿಂದೆ ಅವರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 

ಇಬ್ಬರನ್ನು ಮುಂಬೈನ ಬಲ್ಲಾರ್ಡ್ ಎಸ್ಟೇಟ್‌ನಲ್ಲಿರುವ ಕಚೇರಿಯಲ್ಲಿ  ವಿಚಾರಣೆಗೆ ಒಳಪಡಿಸಲಾಗಿತ್ತು. ಇಬ್ಬರೂ ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಅಕ್ರಮ ಹಣ ವರ್ಗಾವಣೆ ನಿಯಂತ್ರ ಕಾಯ್ದೆ ಅಡಿ ಅನಿಲ್‌ ದೇಶಮುಖ್ ಅವರ ನಾಗಪುರದ ನಿವಾಸ ಸೇರಿದಂತೆ ವಿವಿಧ ಕಡೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಶೋಧ ನಡೆಸಿದ್ದರು. ಬಳಿಕ ಇವರಿಬ್ಬರನ್ನು ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗಾಗಿ ಕರೆತರಲಾಗಿತ್ತು. ಬಂಧಿತರನ್ನು ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಒಪ್ಪಿಸುವಂತೆ ಮನವಿ ಮಾಡಲಾಗುವುದು ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹೇಳಿದ್ದಾರೆ.

SCROLL FOR NEXT