ಪ್ರಧಾನಿ ನರೇಂದ್ರ ಮೋದಿ 
ದೇಶ

ಪ್ರಧಾನಿ ಮೋದಿಯ ಧೈರ್ಯದ ಮಾತುಗಳ ನಂತರ ಕೊರೋನಾ ಲಸಿಕೆ ಪಡೆದ ಗ್ರಾಮಸ್ಥರು

ಕೋವಿಡ್ -19 ಲಸಿಕೆ ಪಡೆಯಲು ಹಿಂಜರಿಯಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಒತ್ತಾಯಿಸಿದ್ದಾರೆ. ಇನ್ನು ಪ್ರಧಾನಿ ಅವರೊಂದಿಗೆ ಮಾತನಾಡಿದ ಬಳಿಕ ಮಧ್ಯಪ್ರದೇಶದ ಗ್ರಾಮಸ್ಥರೊಬ್ಬರು ತಮ್ಮ ಇಡೀ ಕುಟುಂಬಕ್ಕೆ ಲಸಿಕೆ ಹಾಕಿಸಿದ್ದಾರೆ. 

ಭೋಪಾಲ್: ಕೋವಿಡ್ -19 ಲಸಿಕೆ ಪಡೆಯಲು ಹಿಂಜರಿಯಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಒತ್ತಾಯಿಸಿದ್ದಾರೆ. ಇನ್ನು ಪ್ರಧಾನಿ ಅವರೊಂದಿಗೆ ಮಾತನಾಡಿದ ಬಳಿಕ ಮಧ್ಯಪ್ರದೇಶದ ಗ್ರಾಮಸ್ಥರೊಬ್ಬರು ತಮ್ಮ ಇಡೀ ಕುಟುಂಬಕ್ಕೆ ಲಸಿಕೆ ಹಾಕಿಸಿದ್ದಾರೆ. 

ಕೊರೋನಾವೈರಸ್ ವಿರುದ್ಧ ಲಸಿಕೆ ಪಡೆಯುವಂತೆ ಬೆತುಲ್ ಜಿಲ್ಲೆಯ ದುಲಾರಿಯಾ ಗ್ರಾಮದ ನಿವಾಸಿಗಳೊಂದಿಗೆ ಪ್ರಧಾನಿ ಮೋದಿ ಮಾತನಾಡಿದರು. ಪ್ರಧಾನಮಂತ್ರಿಯ ಮಾಸಿಕ ಮನ್ ಕೀ ಬಾತ್ ನಲ್ಲಿ ಈ ದೂರವಾಣಿ ಸಂಭಾಷಣೆಯನ್ನು ಪ್ರಸಾರ ಮಾಡಲಾಯಿತು.

ಲಸಿಕೆ ಅಭಿಯಾನದ ಬಗ್ಗೆ ಇರುವ ಅನುಮಾನಗಳನ್ನು ಬಗೆಹರಿಸುವ ಪ್ರಯತ್ನ ನಡೆಸಿದ ಮೋದಿ ಲಸಿಕೆ ಪಡೆಯುವಂತೆ ಸಲಹೆ ನೀಡಿದರು. ಪ್ರಧಾನಿಗಳೊಂದಿಗಿನ ಮಾತುಕತೆ ನಂತರ 43 ವರ್ಷದ ರಾಜೇಶ್ ಹಿರಾವೆ ತನ್ನು ಕುಟುಂಬ ಸದಸ್ಯರೊಂದಿಗೆ ಶನಿವಾರ ಕೊರೋನಾವೈರಸ್ ತಡೆಗಟ್ಟಲು ಲಸಿಕೆ ಡೋಸ್ ಪಡೆದಿರುವುದಾಗಿ ಹಿರವೆ ಹೇಳಿದ್ದಾರೆ. 

ಇದೇ ಅಲ್ಲದೆ ತಮ್ಮ ಗ್ರಾಮದಲ್ಲಿನ ಜನರನ್ನು ಪ್ರೋತ್ಸಾಹಿಸಿ ಬರೋಬ್ಬರಿ 127 ಜನರಿಗೆ ಲಸಿಕೆ ಕೊಡಿಸಲಾಯಿತು ಎಂದು ಅವರು ಹೇಳಿದರು. ಅಲ್ಲದೆ ಇನ್ನಷ್ಟು ಗ್ರಾಮಸ್ಥರು ಲಸಿಕೆ ಪಡೆಯುವಂತೆ ಸ್ಫೂರ್ತಿ ನೀಡುವುದಾಗಿ ಹೇಳಿದರು. 

ಪ್ರಧಾನಿ ಜೊತೆ ಮಾತನಾಡಿದ್ದು ತುಂಬಾ ಸಂತೋಷವಾಗಿದೆ. ನನ್ನ ಸಂತೋಷವನ್ನು ವ್ಯಕ್ತಪಡಿಸಲು ನನ್ನ ಬಳಿ ಪದಗಳಿಲ್ಲ ಎಂದು ಹಿರಾವೆ ಹೇಳಿದ್ದಾರೆ. 

ವಾಟ್ಸ್‌ಆ್ಯಪ್‌ನಲ್ಲಿ ಲಸಿಕೆ ಬಗ್ಗೆ ತಪ್ಪು ಮಾಹಿತಿಗಳು ಹರಡಿರುವುದರಿಂದ ಜನರು ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ ಎಂದು ಹಿರಾವೆ ಪ್ರಧಾನ ಮಂತ್ರಿಯೊಂದಿಗೆ ಮಾತನಾಡುತ್ತಾ ಹೇಳಿದರು.

ಹಿರಾವ್ ಮತ್ತು ಧುರ್ವೆ ಅವರೊಂದಿಗೆ ಮಾತನಾಡುವಾಗ ಪ್ರಧಾನಿ ಮೋದಿ ಅವರು ಸುಮಾರು 100 ವರ್ಷದ ತಮ್ಮ ತಾಯಿ ಲಸಿಕೆಯ ಎರಡೂ ಡೋಸ್ ಗಳನ್ನು ತೆಗೆದುಕೊಂಡಿದ್ದಾರೆ. ಜನರು ವದಂತಿಗಳನ್ನು ನಂಬಬೇಡಿ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!