ಅಟಾರ್ನಿ ಜನರಲ್ ವೇಣುಗೋಪಾಲ್ 
ದೇಶ

ಅಟಾರ್ನಿ ಜನರಲ್​ ಕೆ.ಕೆ. ವೇಣುಗೋಪಾಲ್ ಅಧಿಕಾರಾವಧಿ ಮತ್ತೊಂದು ವರ್ಷ ವಿಸ್ತರಣೆ: ಕೇಂದ್ರ ಸರ್ಕಾರ

ಅಟಾರ್ನಿ ಜನರಲ್​ ಕೆ.ಕೆ. ವೇಣುಗೋಪಾಲ್ ಅಧಿಕಾರಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ನವದೆಹಲಿ: ಅಟಾರ್ನಿ ಜನರಲ್​ ಕೆ.ಕೆ. ವೇಣುಗೋಪಾಲ್ ಅಧಿಕಾರಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ದೇಶದ ಅಟಾರ್ನಿ ಜನರಲ್​ ಕೆ.ಕೆ. ವೇಣುಗೋಪಾಲ್​ ಅವರ ಅಧಿಕಾರ ಅವಧಿಯನ್ನು ಇನ್ನೊಂದು ವರ್ಷಕ್ಕೆ ವಿಸ್ತರಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದ್ದು, ಕೆ.ಕೆ.ವೇಣುಗೋಪಾಲ್​ ಅಧಿಕಾರ ಅವಧಿ ಇದು ಎರಡನೇ ಬಾರಿಗೆ ವಿಸ್ತರಣೆಯಾಗುತ್ತಿದ್ದು, ಅವರು 2022ರ ಜೂನ್​ 30ರವರೆಗೆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. 

ಕೆ.ಕೆ.ವೇಣುಗೋಪಾಲ್​ ಅವರು 2017ರಲ್ಲಿ, ಮೂರು ವರ್ಷಗಳ ಅವಧಿಗೆ ಅಟಾರ್ನಿ ಜನರಲ್ ಆಗಿ ನೇಮಕಗೊಂಡಿದ್ದರು. 2020ರಲ್ಲೇ ಅವರ ಅಧಿಕಾರ ಅವಧಿ ಮುಗಿಯಬೇಕಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು 2021ರ ಜೂ.30ರವರೆಗೆ ವಿಸ್ತರಿಸಿತ್ತು. ಇದೀಗ ಅವರ ನಿವೃತ್ತಿಗೆ ಇನ್ನೆರಡು ದಿನ  ಇರಬೇಕಾದರೆ ಮತ್ತೊಂದು ವರ್ಷಗಳ ಕಾಲ ವಿಸ್ತರಣೆಯಾಗಿದೆ.

'ಸುಪ್ರೀಂಕೋರ್ಟ್‌ನಲ್ಲಿ ಅವರು ನಿರ್ವಹಿಸುತ್ತಿರುವ ಉನ್ನತ ಮಟ್ಟದ ಪ್ರಕರಣಗಳು ಮತ್ತು ಬಾರ್‌ ಅಸೋಸಿಯೇಷನ್‌ನಲ್ಲಿ ಅವರ ಅನುಭವವನ್ನು ಪರಿಗಣಿಸಿ, ಅವರ ಅಧಿಕಾರಾವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಆದಷ್ಟು ಶೀಘ್ರ ಅಧಿಕೃತ ಆದೇಶ ಹೊರ ಬೀಳಲಿದೆ ಎಂದು  ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel