ಸಂಗ್ರಹ ಚಿತ್ರ 
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.15 ಕೋಟಿ ಡೋಸ್ ಕೋವಿಡ್ ಲಸಿಕೆ ಇದೆ: ಕೇಂದ್ರ ಸರ್ಕಾರ

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 1.15 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ನವದೆಹಲಿ: ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 1.15 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಈವರೆಗೆ ಕೇಂದ್ರವು ರಾಜ್ಯಗಳಿಗೆ 31.69  (31,69,40,160) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 1,15,22,543 ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.

ಶನಿವಾರ ಲಭ್ಯವಿರುವ ಮಾಹಿತಿಯ ಪ್ರಕಾರ, ತ್ಯಾಜ್ಯಗಳು ಸೇರಿದಂತೆ ಒಟ್ಟು 30,54,17,617 ಪ್ರಮಾಣದಷ್ಟು ಬಳಕೆಯಾಗಿದೆ ಎಂದು ತಿಳಿಸಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 32,36,63,297 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ಮೂಲಕ ಕೋವಿಡ್ ಲಸಿಕೆ ನೀಡಿಕೆಯಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದು, ಒಟ್ಟು ಲಸಿಕೆ ನೀಡಿಕೆಯಲ್ಲಿ ಅಮೆರಿಕವನ್ನೂ ಮೀರಿಸಿದೆ. 

ಅಮೆರಿಕಾದಲ್ಲಿ ಈವರೆಗೆ 32,33,27,328 ಡೋಸ್ ಲಸಿಕೆ ನೀಡಲಾಗಿದ್ದು, ಭಾರತದಲ್ಲಿ 32,36,63,297 ಡೋಸ್ ಲಸಿಕೆ ನೀಡಲಾಗಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 46,148 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 979 ಕೋವಿಡ್'ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!