ಪೋಲೀಸ್ ವಶಕ್ಕೆ ಪಡೆದಿರುವ ಸಿಪಿಎಂ ಕಾರ್ಯಕರ್ತರು 
ದೇಶ

ಅತ್ಯಾಚಾರ ಪ್ರಕರಣ: ಕೇರಳದ ಇಬ್ಬರು ಸಿಪಿಎಂ ಕಾರ್ಯಕರ್ತರು ಪೋಲೀಸ್ ವಶಕ್ಕೆ

ವಡಗರ ಮುಡಪ್ಪಿಲಾವ್‌ನಲ್ಲಿರುವ ಮನೆಯಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತರೊಬ್ಬರ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಮಾಜಿ ಸಿಪಿಎಂ ಕಾರ್ಯಕರ್ತರನ್ನು ಪೊಲೀಸರು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಕೋಳಿಕ್ಕೋಡ್ (ಕೇರಳ): ವಡಗರ ಮುಡಪ್ಪಿಲಾವ್‌ನಲ್ಲಿರುವ ಮನೆಯಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತರೊಬ್ಬರ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಮಾಜಿ ಸಿಪಿಎಂ ಕಾರ್ಯಕರ್ತರನ್ನು ಪೊಲೀಸರು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಆರೋಪಿಗಳನ್ನು ಪುಲ್ಲುಲ್ಲಪರಂಬತ್ ನ ಬಾಬುರಾಜ್, ಸಿಪಿಎಂ ಮುಳ್ಳಿಯೇರಿ ಶಾಖಾ ಕಾರ್ಯದರ್ಶಿ ಮತ್ತು ಡಿವೈಎಫ್‌ಐ ಪದಿಯರಕ್ಕರ ಪ್ರದೇಶದ ಕಾರ್ಯದರ್ಶಿ ಟಿ.ಪಿ. ಲಿಜೀಶ್ ಎಂದು ಗುರುತಿಸಲಾಗಿದೆ.

ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದಾಗಿನಿಂದಲೂ ಇವರಿಬ್ಬರೂ ನಾಪತ್ತೆಯಾಗಿದ್ದರು. ಮೂಲಗಳ ಪ್ರಕಾರ, ಆರೋಪಿಗಳು ಪ್ರಾಥಮಿಕ ವಿಚಾರಣೆಗೆ ಒಳಗಾಗಿದ್ದಾರೆ ಮತ್ತು ಶೀಘ್ರದಲ್ಲೇ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

ಶನಿವಾರ, ಸಿಪಿಎಂ ಕಾರ್ಯಕರ್ತರೂ ಆದ ವಿವಾಹಿತ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ. ಮೂರು ತಿಂಗಳ ಹಿಂದೆ ಬಾಬುರಾಜ್ ತನ್ನ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. ತರುವಾಯ, ಈ ಘಟನೆಯನ್ನು ತನ್ನ ಪತಿಗೆ ಹೇಳುವುದಾಗಿ ಬ್ಲ್ಯಾಕ್ ಮೇಲ್ ಮಾಡುವ ಮೂಲಕ ಅವನು ಮತ್ತೆ ಹಲವಾರು ಬಾರಿ ಸಂತ್ರಸ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡನು 

ಘಟನೆ ಬಗ್ಗೆ ಸಾರ್ವಜನಿಕವಾಗಿ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುವ ಮೂಲಕ ಲಿಜೀಶ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅದರ ನಂತರ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ