ದೇಶ

ಅಂತರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧ ಜುಲೈ 31ರವರೆಗೆ ವಿಸ್ತರಣೆ

Raghavendra Adiga

ನವದೆಹಲಿ: ದೇಶದಲ್ಲಿ ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಬರುವ ಜುಲೈ 31ರವರೆಗೆ ನಿಗದಿತ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸೇವೆಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ.

‘ಜೂನ್‍ 2020ರ ಜೂನ್‍ 6ರಂದು ಹೊರಡಿಸಲಾದ ಸುತ್ತೋಲೆಯನ್ನು ಭಾಗಶಃ ಮಾರ್ಪಡಿಸಿ ನಿಗದಿತ ಅಂತರಾಷ್ಟ್ರೀಯ ವಿಮಾನಗಳ ಸೇವೆಯನ್ನು ಬರುವ ಜುಲೈ 31ರವರೆಗೆ ಸ್ಥಗಿತಗೊಳಿಸಲಾಗಿದೆ.’ ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(ಡಿಜಿಸಿಎ) ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಆದರೆ, ಈ ನಿರ್ಬಂಧಗಳು ಸರಕು ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. 

ಅಲ್ಲದೆ, ಆಯ್ದ ಮಾರ್ಗಗಳಲ್ಲಿ ಕೇಸ್-ಟು-ಕೇಸ್ ಆಧಾರದ ಮೇಲೆ ಅಂತರಾ ಷ್ಟ್ರೀಯ ನಿಗದಿತ ವಿಮಾನಗಳನ್ನು ಅನುಮತಿಸಬಹುದು ಎಂದು ಡಿಜಿಸಿಎ ಹೇಳಿದೆ. ಕೋವಿಡ್ 19 ರ ಹರಡುವಿಕೆಯನ್ನು ನಿಯಂತ್ರಿಸಲು  ರಾಷ್ಟ್ರವ್ಯಾಪಿ ಲಾಕ್‌ಡೌನ್ ಅನ್ನು ಕಳೆದ ವರ್ಷ ಘೋಷಿಸಿದ ನಂತರ 2020 ರ ಮಾರ್ಚ್‌ನಿಂದ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಯಾನಗಳನ್ನು ಸ್ಥಗಿತಗೊಳಿಸಲಾಗಿದೆ.

ನಂತರ, ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಸರ್ಕಾರವು ವಿಶೇಷ ಕಾರ್ಯಕ್ರಮ - ವಂದೇ ಭಾರತ್ ಮಿಷನ್ ಅನ್ನು ಪ್ರಾರಂಭಿಸಿತು. ಈ ಕುರಿತಂತೆ ಉಭಯ ದೇಶಗಳ ನಡುವೆ ವಿಶೇಷ ವಿಮಾನಯಾನ ನಡೆಸಲು 24 ದೇಶಗಳೊಂದಿಗೆ ಏರ್ ಬಬಲ್ ಎಂಬ ಒಪ್ಪಂದಕ್ಕೆ ಸಹಿ ಹಾಕಿತು.

SCROLL FOR NEXT