ಸುಪ್ರೀಂ ಕೋರ್ಟ್ 
ದೇಶ

ಕೋವಿಡ್ ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಪರಿಹಾರ ಕೊಡಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ 

ಕೋವಿಡ್-19ನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ನೀಡಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(NDMA)ಕ್ಕೆ ಸೂಚಿಸಿದೆ. 

ನವದೆಹಲಿ: ಕೋವಿಡ್-19ನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ನೀಡಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(NDMA)ಕ್ಕೆ ಸೂಚಿಸಿದೆ. 

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿ, ಕೋವಿಡ್-19 ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ನೀಡಬಹುದಾದ ಪರಿಹಾರದ ಮೊತ್ತವನ್ನು ಅಂದಾಜು ಮಾಡಿ ಮಾರ್ಗಸೂಚಿ ಹೊರಡಿಸುವಂತೆ 6 ವಾರಗಳ ಗಡುವನ್ನು ಕೇಂದ್ರ ಸರ್ಕಾರ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಆದೇಶಿಸಿದೆ. 

ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 12 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಡೆಯಿಂದ ಶಾಸನಬದ್ಧ ಬಾಧ್ಯತೆಯನ್ನು ಹೊಂದಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಅಂತಹ ಕನಿಷ್ಠ ಪರಿಹಾರವು ಸೆಕ್ಷನ್ 12 ರ ಪ್ರಕಾರ ಎಕ್ಸ್ ಗ್ರೇಷಿಯಾ ನೆರವನ್ನು ಒಳಗೊಂಡಿರುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸೆಕ್ಷನ್ 12 ಕಡ್ಡಾಯ ನಿಬಂಧನೆಯಲ್ಲ ಎಂಬ ಕೇಂದ್ರ ಸರ್ಕಾರದ ವಾದವನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಸೆಕ್ಷನ್ 12 ಎಂಬ ಪದ ಬಳಕೆಯನ್ನು ಒಪ್ಪಿಕೊಂಡಿದೆ.

ಆದರೆ, ಇಂತಿಷ್ಟೇ ಮೊತ್ತ ಪರಿಹಾರ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ, ಪರಿಹಾರವಾಗಿ ಎಷ್ಟು ಮೊತ್ತ ನೀಡಬಹುದು ಎಂದು ಪರಿಶೀಲಿಸಿ ಮಾರ್ಗಸೂಚಿ ಹೊರಡಿಸುವಂತೆ ಸೂಚಿಸಿದೆ. 

ಕೋವಿಡ್ ಸಾವುನೋವುಗಳಿಗೆ ಮರಣ ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಸರಳೀಕರಿಸಲು ಸೂಕ್ತ ಮಾರ್ಗಸೂಚಿಗಳನ್ನು ನೀಡುವಂತೆ ಹಾಗೂ ಹಣಕಾಸು ಆಯೋಗವು ಪ್ರಸ್ತಾಪಿಸಿದಂತೆ ಶವ ಸಂಸ್ಕಾರಕ್ಕಾಗಿ ವಿಮಾ ಯೋಜನೆಯನ್ನು ರೂಪಿಸಲು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT