ದೇಶ

ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ: ರಾಹುಲ್ ಗಾಂಧಿ

Nagaraja AB

ನವದೆಹಲಿ: ಭಾರತ  ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. 
ಭಾರತದಲ್ಲಿನ ಪ್ರಜಾಪ್ರಭುತ್ವ ಕುರಿತ ಸ್ವಿಡನ್ ಇನ್ಸಿಟಿಟ್ಯೂಟ್ ವರದಿ ಬಗ್ಗೆ ಮಾಧ್ಯಮಗಳ ಸುದ್ದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಭಾರತವನ್ನು 'ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ'ದಿಂದ' ಚುನಾವಣಾ ಪ್ರಜಾಪ್ರಭುತ್ವ'ಕ್ಕೆ ಇಳಿಸಿರುವ ಸ್ವೀಡನ್‌ನ ವಿ-ಡೆಮ್ ಸಂಸ್ಥೆಯ ಪ್ರಜಾಪ್ರಭುತ್ವ ವರದಿಯನ್ನು ಉಲ್ಲೇಖಿಸಿ  ಭಾರತ  ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಭಾರತದಲ್ಲಿನ ಪ್ರಜಾಪ್ರಭುತ್ವಕ್ಕೆ ಕೆಳಮಟ್ಟದ ಶ್ರೇಯಾಂಕ  ಒದಗಿಸಿದ  ಅಮೆರಿಕ ಸರ್ಕಾರ ಅನುದಾನ ಒದಗಿಸುವ ಸ್ವಯಂ ಸೇವಾ ಸಂಸ್ಥೆಯೊಂದರ ಮತ್ತೊಂದು ಜಾಗತಿಕ ವರದಿ ಬೆನ್ನಲ್ಲೇ, ರಾಹುಲ್ ಗಾಂಧಿ ಈ  ರೀತಿಯ ಹೇಳಿಕೆ ನೀಡಿದ್ದು, ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜಕೀಯ ಹಕ್ಕುಗಳು ಮತ್ತು ನಾಗರಿಕ ಸ್ವಾತಂತ್ರ್ಯಗಳು ಇಲ್ಲದಂತಾಗಿವೆ ಎಂದಿದ್ದಾರೆ. 

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸುಭದ್ರವಾಗಿರುವುದಾಗಿ ಸಮರ್ಥಿಸಿಕೊಂಡಿರುವ ಸರ್ಕಾರ, ಫ್ರೀಡಂ ಹೌಸ್ ವರದಿಯನ್ನು ಬಲವಾಗಿ ಖಂಡಿಸಿದೆ ಮತ್ತು ಅದನ್ನು  ದಾರಿತಪ್ಪಿಸುವ, ತಪ್ಪಾದ ವರದಿ ಎಂದು ಕರೆದಿದೆ. ಭಾಷಣ ಮತ್ತು ಅಭಿವ್ಯಕ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

SCROLL FOR NEXT