ಬಿಹಾರ: ಬಿಜೆಪಿ ಎಂಎಲ್ ಸಿ ಹರಿ ನಾರಾಯಣ್ ಚೌಧರಿ ಕೋವಿಡ್ ಗೆ ಬಲಿ
ಬಿಹಾರ ಬಿಜೆಪಿ ಎಂಎಲ್ಸಿ ಹರಿ ನಾರಾಯಣ್ ಚೌಧರಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ಪಾಟ್ನಾ: ಬಿಹಾರ ಬಿಜೆಪಿ ಎಂಎಲ್ಸಿ ಹರಿ ನಾರಾಯಣ್ ಚೌಧರಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
77 ವರ್ಷದ ಚೌಧರಿ ಸಮಸ್ತಿಪುರ ಸ್ಥಳೀಯ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಕೊರೋನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ 1 ವಾರದ ಹಿಂದೆ ಇಂದಿರಾಗಾಂಧಿ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಬಿಹಾರ ವಿಧಾನ ಪರಿಷತ್ ಸಭಾಧ್ಯಕ್ಷ ಅವದೇಶ್ ನರೈನ್ ಸಿಂಗ್ ಹೇಳಿದ್ದಾರೆ.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ. ಸಿಎಂ ನಿತೀಶ್ ಕುಮಾರ್ ಕೂಡ ಚೌಧರಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಚೌಧರಿ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ. ಸರ್ಕಾರದ ಸಕಲ ಗೌರವಗಳೊಂದಿಗೆ ಮುಕ್ತಿಧಾಮದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.