ದೇಶ

ಬಂಗಾಳದಲ್ಲಿ ಟಿಎಂಸಿ, ತಮಿಳುನಾಡಿನಲ್ಲಿ ಡಿಎಂಕೆ ಗೆಲುವಿನತ್ತ ದಾಪುಗಾಲು..!!

Manjula VN

ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಸಂಜೆ ವೇಳೆಗೆ ಸೋಲು- ಗೆಲುವಿನ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ಟಿಎಂಸಿ 79 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದೆ, ಬಿಜೆಪಿ 63 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದು, ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿಗೆ ಸದ್ಯ ಕೊಂಚ ಹಿನ್ನಡೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ 23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಡಿಎಂಕೆ 42 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕೇರಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಎಲ್ ಡಿಎಫ್ 78 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ , ಯುಡಿಎಫ್ 53 ಕ್ಷೇತ್ರಗಳಲ್ಲಿ ಈವರೆಗೆ ಮುನ್ನಡೆ ಸಾಧಿಸಿದೆ.ಅಸ್ಸಾಂ ನಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ಸದ್ಯ 12 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ ಎಂಬ ಮಾಹಿತಿ ದೊರಕಿದೆ.

SCROLL FOR NEXT