ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚನೆ- ಸೊನೊವಾಲ್
ಅಸ್ಸಾಂನಲ್ಲಿ ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಮತ್ತೆ ಸರ್ಕಾರ ರಚಿಸಲಿದೆ ಎಂದು ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಿಬ್ರುಗರ್: ಅಸ್ಸಾಂನಲ್ಲಿ ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಮತ್ತೆ ಸರ್ಕಾರ ರಚಿಸಲಿದೆ ಎಂದು ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸದ್ಯದ ಟ್ರೆಂಡ್ ಪ್ರಕಾರ, ಬಿಜೆಪಿ ಯುನೈಟೆಡ್ ಫೀಪಲ್ಸ್ ಪಾರ್ಟಿ ಲಿಬರಲ್ ಜೊತೆಗೂಡಿ ಸರ್ಕಾರ ರಚಿಸಲಿದೆ ಎಂದು ಸೊನೊವಾಲ್ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಇದು ಜನರ ಬೆಂಬಲದಿಂದ ಸಿಕ್ಕ ಗೆಲುವು. ಮತ ಎಣಿಕೆ ಪೂರ್ಣಗೊಳ್ಳುವವರೆಗೂ ಕಾಯುತ್ತೇವೆ. ಆದರೆ, ಸದ್ಯದ ಅಂಕಿ ಅಂಕಿಗಳ ಪ್ರಕಾರ ಗೆಲುವು ನಮ್ಮ ಕಡೆ ಇದೆ ಎಂದು ಅವರು ಹೇಳಿದ್ದಾರೆ.
ಅಸ್ಸಾಂ 126 ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದೆ. ಮಜೌಲಿ ಕ್ಷೇತ್ರದಲ್ಲಿ ಸೊನೊವಾಲ್
ಮುನ್ನಡೆ ಕಾಯ್ದುಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.