ಮಮತಾ ಬ್ಯಾನರ್ಜಿ 
ದೇಶ

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ-2021 ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಮಮತಾಗೆ ಮುನ್ನಡೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೈ ಪ್ರೊಫೈಲ್ ಅಖಾಡವಾಗಿರುವ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. 

ನಂದಿಗ್ರಾಮ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೈ ಪ್ರೊಫೈಲ್ ಅಖಾಡವಾಗಿರುವ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. 

6 ನೇ ಸುತ್ತಿನ ಮತ ಎಣಿಕೆವರೆಗೂ ಸುವೇಂದು ಅಧಿಕಾರಿ 7,000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ ನಂತರದ ಸುತ್ತುಗಳಲ್ಲಿ ಮಮತಾ ಬ್ಯಾನರ್ಜಿ ನಿಧಾನವಾಗಿ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. 

ಉಭಯ ಅಭ್ಯರ್ಥಿಗಳಿಗೂ ಪ್ರತಿಷ್ಠೆಯ ಕ್ಷೇತ್ರವಾಗಿರುವ ನಂದಿಗ್ರಾಮದಲ್ಲಿ ಆರಂಭಿಕ ಹಂತದಿಂದಲೂ ಸುವೇಂದು ಅಧಿಕಾರಿ ಮುನ್ನಡೆ ಕಾಯ್ದುಕೊಂಡಿದ್ದರು. 

ಇನ್ನು ಆರಂಭದಿಂದಲೂ ಟಿಎಂಸಿಗೆ ಪ್ರಬಲ ಪೈಪೋಟಿ ನೀಡುತ್ತಿದ್ದ ಬಿಜೆಪಿಯ ಮುನ್ನಡೆ ಕ್ರಮೇಣ ಕ್ಷೀಣಿಸತೊಡಗಿದೆ. ಇತ್ತೀಚಿನ ವರದಿಯ ಪ್ರಕಾರ ಒಟ್ಟಾರೆ 294 ಕ್ಷೇತ್ರಗಳ ಪೈಕಿ ಟಿಎಂಸಿ 205 ರಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 84, ಕಾಂಗ್ರೆಸ್ 1, ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ