ಸಂಗ್ರಹ ಚಿತ್ರ 
ದೇಶ

ಕೋವಿಡ್ ಲಸಿಕೆಗಳನ್ನು ಖರೀದಿಸಲಿಲ್ಲ ಎಂಬ ಆರೋಪವನ್ನು ತಳ್ಳಿಹಾಕಿದ ಕೇಂದ್ರ

ಮೇ, ಜೂನ್ ಮತ್ತು ಜುಲೈ ತಿಂಗಳಲ್ಲಿ 11 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಗಾಗಿ 1732.50 ಕೋಟಿ ರೂಪಾಯಿಗಳನ್ನು ಮುಂಗಡವಾಗಿ ಏಪ್ರಿಲ್ 28ರಂದೇ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ನವದೆಹಲಿ: ಮೇ, ಜೂನ್ ಮತ್ತು ಜುಲೈ ತಿಂಗಳಲ್ಲಿ 11 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಗಾಗಿ 1732.50 ಕೋಟಿ ರೂಪಾಯಿಗಳನ್ನು ಮುಂಗಡವಾಗಿ ಏಪ್ರಿಲ್ 28ರಂದೇ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಟಿಡಿಎಸ್ ನಂತರ 1699.50 ಕೋಟಿ ರೂ.ಗಳಷ್ಟಿದ್ದ ಮೊತ್ತವನ್ನು ಏಪ್ರಿಲ್ 28 ರಂದು ಎಸ್‌ಐಐ ಸ್ವೀಕರಿಸಿದೆ ಎಂದು ಸಚಿವಾಲಯ ಹೇಳಿದೆ.

ದಿನಾಂಕದಂತೆ, 10 ಕೋಟಿ ಡೋಸ್‌ಗಳ ಪೈಕಿ ಮೇ 3 ರವರೆಗೆ 8.744 ಕೋಟಿ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಕೋವಿಡ್ ಲಸಿಕೆಗಾಗಿ ಕೇಂದ್ರವು ಯಾವುದೇ ಹೊಸ ಆರ್ಡರ್ ನೀಡಿಲ್ಲ ಎಂದು ಆರೋಪಿಸಿರುವ ಮಾಧ್ಯಮ ವರದಿಗಳು ತಪ್ಪು ಮತ್ತು ಸತ್ಯಕ್ಕೆ ದೂರವಾದವು ಎಂದು ಕೇಂದ್ರ ಹೇಳಿದೆ. 

ಅಲ್ಲದೆ ಹೆಚ್ಚುವರಿಯಾಗಿ, ಮೇ, ಜೂನ್ ಮತ್ತು ಜುಲೈ ಅವಧಿಯಲ್ಲಿ ಐದು ಕೋಟಿ ಕೋವಾಕ್ಸಿನ್ ಡೋಸ್ ಗಳಿಗೆ ಏಪ್ರಿಲ್ 28 ರಂದು ಭಾರತ್ ಬಯೋಟೆಕ್ ಇಂಡಿಯಾ ಲಿಮಿಟೆಡ್‌ಗೆ (ಬಿಬಿಐಎಲ್) 787.50 ಕೋಟಿ ರೂ.ಗಳ 100 ಶೇಕಡಾ ಮುಂಗಡವನ್ನು ಬಿಡುಗಡೆ ಮಾಡಲಾಗಿದೆ. ಈ ಮೊತ್ತವನ್ನು ಅವರು ಏಪ್ರಿಲ್ 28 ರಂದು ಸ್ವೀಕರಿಸಿದ್ದಾರೆ. ಕೊವಾಕ್ಸಿನ್ ಲಸಿಕೆ ಸರಬರಾಜುಗಾಗಿ ಎರಡು ಕೋಟಿ ಡೋಸ್‌ಗಳ ಪೈಕಿ ಮೇ 3 ರವರೆಗೆ 0.8813 ಕೋಟಿ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಮೇ 2ರವರೆಗೂ, ಕೇಂದ್ರವು 16.54 ಕೋಟಿ ಲಸಿಕೆ ಪ್ರಮಾಣವನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಿದೆ. ಇದೇ ವೇಳೆ ಇನ್ನೂ 78 ಲಕ್ಷಕ್ಕೂ ಹೆಚ್ಚು ಡೋಸ್ ಗಳು ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ 56 ಲಕ್ಷಕ್ಕೂ ಹೆಚ್ಚಿನ ಡೋಸ್ ಗಳನ್ನು ರಾಜ್ಯಗಳು ಮತ್ತು ಯುಟಿಗಳು ನೀಡಲಾಗುವುದು ಎಂದು ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್