ಮಮತಾ ಬ್ಯಾನರ್ಜಿ 
ದೇಶ

ಟಿಎಂಸಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಮಮತಾ ಅವಿರೋಧ ಆಯ್ಕೆ; ಮೇ 5ಕ್ಕೆ ಸಿಎಂ ಆಗಿ ಪ್ರಮಾಣವಚನ

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಮೇ 5ರಂದು ಪ್ರಮಾಮ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಕೋಲ್ಕತಾ: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಮೇ 5ರಂದು ಪ್ರಮಾಮ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಇಂದು ನಡೆದ ಟಿಎಂಸಿ ಶಾಸಕಾಂಗ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಅಧಿಕೃತವಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಆ ಮೂಲಕ ಮಮತಾ ಬ್ಯಾನರ್ಜಿ ಅವರು ಸತತ ಮೂರನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಇದೇ ಮೇ 5ರಂದು ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಮಮತಾ ಬ್ಯಾನರ್ಜಿ ಅವರೊಂದಿಗೆ ಯಾರೆಲ್ಲಾ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದು ತಿಳಿದುಬಂದಿಲ್ಲ. 

ಸಂಜೆ 7 ಗಂಟೆಗೆ ರಾಜ್ಯಪಾಲರ ಭೇಟಿ
ಇನ್ನು ಇಂದು ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಲಿರುವ ಮಮತಾ ಬ್ಯಾನರ್ಜಿ ಅವರು ನೂತನ ಸರ್ಕಾರ ರಚನೆ ಮಾಡಲು ಹಕ್ಕು ಮಂಡಿಸಲಿದ್ದಾರೆ. ಇದಕ್ಕಾಗಿ ಇಂದು ಸಂಜೆ 7 ಗಂಟೆಗೆ ಭೇಟಿಗೆ ಅನುಮತಿ ಕೋರಿದ್ದು, ರಾಜ್ಯಪಾಲರ ಕಚೇರಿ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ. 

ನಂದಿಗ್ರಾಮ ಫಲಿತಾಂಶ; ಚುನಾವಣಾ ಆಯೋಗದ ವಿರುದ್ಧ ಕೋರ್ಟ್ ಗೆ ಅರ್ಜಿ
ಇದೇ ವೇಳೆ ನಂದಿಗ್ರಾಮ ಕ್ಷೇತ್ರದ ಫಲಿತಾಂಶದ ಕುರಿತು ಚುನಾವಣಾ ಆಯೋಗದ ಕ್ರಮದ ವಿರುದ್ಧ ಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ಮಮತಾ ಘೋಷಣೆ ಮಾಡಿದ್ದು, ಫಲಿತಾಂಶ ಘೋಷಣೆಯೇ ಗೊಂದಲದಿಂದ ಕೂಡಿದೆ. ಸಾಕಷ್ಟು ಮತಗಳ ಮತಎಣಿಕೆ ಬಾಕಿ ಇರುವಾಗಲೇ ಆಯೋಗ ಫಲಿತಾಂಶ ಘೋಷಣೆ ಮಾಡಿದ್ದು ಅನುಮಾನ ಮೂಡಿಸುತ್ತಿದೆ. ಹೀಗಾಗಿ ಮರು ಮತ ಎಣಿಕೆ ಕುರಿತು ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಟಿಎಂಸಿ ಹೇಳಿದೆ.

ಈ ಹಿಂದೆ ಇದೇ ವಿಚಾರವಾಗಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, 'ನಾನು ಜನರ ತೀರ್ಪನ್ನು ಸ್ವೀಕರಿಸುತ್ತೇನೆ. ಫಲಿತಾಂಶ ಘೋಷಣೆಯ ನಂತರ ಕೆಲವು ಕಾಣದ ಕೈಗಳ ಕೈವಾಡ ನಡೆದಿವೆ. ನಾನು ಅದೇನು ಎಂದು ಶೀಘ್ರ ಬಹಿರಂಗಪಡಿಸುತ್ತೇನೆ. ಈ ಸಂಬಂಧ ಮರು ಮತಎಣಿಕೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಹಾಕುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT