ದೇಶ

ಕೋವಿಡ್-19: ದೇಶದಲ್ಲಿಂದು 3.57 ಲಕ್ಷ ಹೊಸ ಕೇಸ್ ಪತ್ತೆ, 3,449 ಮಂದಿ ಸಾವು

Manjula VN

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಎಂದಿನಂತೆ ಮುಂದುವರೆದಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 3,57 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 2 ಕೋಟಿ ಗಡಿ ದಾಟಿದೆ. 

ಒಂದೇ ದಿನ 3,57,229 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಇದೀಗ ಸೋಂಕಿತರ ಸಂಖ್ಯೆ 2 ಕೋಟಿ ಗಡಿ ದಾಟಿ 2,02,82,833ಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ ದೇಶದಲ್ಲಿ 3,449 ಮಂದಿ ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 2,18,959ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 34,47,133ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,20,289 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,66,13,292ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 16,63,742 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 29,33,10,779 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 15,89,32,921 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

SCROLL FOR NEXT