ದೇಶ

ತಮಿಳುನಾಡು ವಿಧಾನಸಭೆಗೆ ಆಯ್ಕೆಯಾದ ಶೇ. 25 ರಷ್ಟು ಶಾಸಕರ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣ

Lingaraj Badiger

ಚೆನ್ನೈ: ಇತ್ತೀಚಿಗಷ್ಟೇ ಮುಕ್ತಾಯವಾದ ತಮಿಳುನಾಡು ಚುನಾವಣೆಯಲ್ಲಿ ವಿಧಾನಸಭೆಗೆ ಆಯ್ಕೆಯಾದ ಒಟ್ಟು ಶಾಸಕರ ಪೈಕಿ ಶೇಕಡಾ 25 ರಷ್ಟು ಶಾಸಕರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ ವರದಿ ಮಾಡಿದೆ.

'ತಮಿಳುನಾಡು ವಿಧಾನಸಭೆ ಚುನಾವಣೆ 2021 ಕ್ರಿಮಿನಲ್ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ಮತ್ತು ವಿಜೇತ ಅಭ್ಯರ್ಥಿಗಳ ಇತರ ವಿವರಗಳ ವಿಶ್ಲೇಷಣೆ' ಎಂಬ ಶೀರ್ಷಿಕೆಯ ವರದಿಯಲ್ಲಿ 224 ಅಭ್ಯರ್ಥಿಗಳ ಪೈಕಿ 57 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಕಳೆದ ಚುನಾವಣೆಯಲ್ಲಿ, ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದ ಶೇ. 19 ಅಂದರೆ, 42 ಶಾಸಕರನ್ನು ಆಯ್ಕೆ ಮಾಡಿಲಾಗಿತ್ತು. ಈ ಬಾರಿ ಶೇ. 25 ರಷ್ಟು ಕ್ರಿಮಿನಲ್ ಪ್ರಕರಣ ಹೊಂದಿರುವ ಶಾಸಕರನ್ನು ಆಯ್ಕೆ ಮಾಡಲಾಗಿದೆ.

ವಿಜೇತ ಇಬ್ಬರು ಅಭ್ಯರ್ಥಿಗಳು ತಮ್ಮ ವಿರುದ್ಧ ಕೊಲೆ(ಐಪಿಸಿ ಸೆಕ್ಷನ್ -302) ಪ್ರಕರಣ ದಾಖಲಾಗಿರುವುದಾಗಿ ಘೋಷಿಸಿದ್ದಾರೆ ಮತ್ತು 13 ವಿಜೇತ ಅಭ್ಯರ್ಥಿಗಳು ಕೊಲೆ ಯತ್ನ ಪ್ರಕರಣಗಳನ್ನು ಘೋಷಿಸಿದ್ದಾರೆ (ಐಪಿಸಿ ಸೆಕ್ಷನ್ -307) ಎಂದು ವರದಿ ತಿಳಿಸಿದೆ.

ವಿಜೇತ ಮೂವರು ಅಭ್ಯರ್ಥಿಗಳು ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಘೋಷಿಸಿದ್ದಾರೆ ಮತ್ತು ಈ ಪೈಕಿ ಒಬ್ಬರು ಅತ್ಯಾಚಾರಕ್ಕೆ ಸಂಬಂಧಿಸಿದ ಪ್ರಕರಣವನ್ನು ಘೋಷಿಸಿಕೊಂಡಿದ್ದಾರೆ.

SCROLL FOR NEXT