ದೇಶ

ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣ: ಪ್ರಧಾನಿ ಮೋದಿ ಶುಭಾಶಯ!

Manjula VN

ನವದೆಹಲಿ: ಪಶ್ಚಿಮ ಬಂಗಾಳ ರಾಜ್ಯದ ಮುಖ್ಯಮಂತ್ರಿಯಾಗಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರು ಪ್ರಮಾಣ ವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಶುಭಾಶಯ ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪಶ್ಚಿಮ ಬಂಗಾಳ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಮಮತಾ ಬ್ಯಾನರ್ಜಿಯವರಿಗೆ ಶುಭಾಶಯಗಳ ಕೋರುತ್ತೇನೆಂದು ಹೇಳಿದ್ದಾರೆ. 

ಇಂದು ಬೆಳಿಗ್ಗೆ ಕೋಲ್ಕತ್ತಾದ ರಾಜ ಭವನದಲ್ಲಿ ಸರಣವಾಗಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮಮತಾ ಬ್ಯಾನರ್ಜಿಯವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. 

ಬಳಿಕ ಮಾತನಾಡಿದ ಅವರು, ’ಕೋವಿಡ್‌ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆಯನ್ನು ಕಾಪಾಡಲು ಗಮನಹರಿಸುತ್ತೇನೆ. ಚುನಾವಣಾ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದ ಕಾರಣ ಹಿಂಸಾಚಾರಗಳು ಸಂಭವಿಸಿವೆ. ಇನ್ನು ಮುಂದೆ ಇದಕ್ಕೆ ಅವಕಾಶ ನೀಡುವುದಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯನ್ನು ನಾನೇ ಹೊತ್ತುಕೊಳ್ಳಲಿದ್ದು, ನಾನೇ ಎಲ್ಲೆಡೆ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆಗೊಳಿಸುತ್ತೇನೆ. ಸಾಂಕ್ರಾಮಿಕ ರೊಗ ಅಂತ್ಯಗೊಂಡ ಬಳಿಕ ದೊಡ್ಡ ಸಮಾರಂಭವನ್ನೇ ಆಯೋಜನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

SCROLL FOR NEXT