ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ: ಕೊರೋನಾ ಸೋಂಕಿಗೆ ತಂದೆ ಸಾವು; ದುಃಖ ತಡೆಯಲಾಗದೆ ತಂದೆಯ ಚಿತೆಗೆ ಹಾರಿದ ಪುತ್ರಿ!

ಕೊರೋನಾದಿಂದ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ದುಃಖ ತಡೆಯಲಾಗದ ಪುತ್ರಿ ಚಿತೆಗೆ ಹಾರಿರುವ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ನಡೆದಿದೆ.

ಬಾರ್ಮರ್: ಕೊರೋನಾದಿಂದ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ದುಃಖ ತಡೆಯಲಾಗದ ಪುತ್ರಿ ಚಿತೆಗೆ ಹಾರಿರುವ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ನಡೆದಿದೆ. 

ದಾಮೋದರ್ ದಾಸ್ ಶಾರ್ದಾ (73) ಎಂಬುವವರು ಕೊರೋನಾ ಸೋಂಕಿಗೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ. 

ದಾಮೋದರ್ ದಾಸ್ ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದು, ನಿನ್ನೆ ಅಂತ್ಯ ಕ್ರಿಯೆ ನಡೆಸುವ ವೇಳೆ ದಾಮೋದರ್ ಅವರ ಕಿರಿಯ ಪುತ್ರಿ ಚಂದ್ರಾ ಶಾರ್ದಾ (34) ಎಂಬುವವರು ದುಃಖ ತಡೆಯಲಾರದೆ ಇದ್ದಕ್ಕಿದ್ದಂತೆ ಚಿತೆಗೆ ಹಾರಿದ್ದಾರೆಂದು ತಿಳಿದುಬಂದಿದೆ.

ಬಳಿಕ ಸ್ಥಳದಲ್ಲಿದ್ದ ಜನರು ಕೂಡಲೇ ರಕ್ಷಣೆ ಮಾಡಿ, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಂದ್ರಾ ಅವರ ದೇಹ ಶೇ.70ರಷ್ಟು ಸುಟ್ಟು ಹೋಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

ದಾಮೋದರ್ ದಾಸ್ ಅವರಿಗೆ ಮೂವರು ಪುತ್ರಿಯರಿದ್ದು, ಇವರ ಪತ್ನಿ ಕೆಲ ದಿನಗಳ ಹಿಂದಷ್ಟೇ ನಿಧನ ಹೊಂದಿದ್ದರು. ತಂದೆಯ ಅಂತ್ಯಕ್ರಿಯೆಗೆ ಹೋಗಲೇಬೇಕೆಂದು ದಾಮೋದರ್ ದಾಸ್ ಅವರ ಕಿರಿಯ ಪುತ್ರಿ ಹಠ ಹಿಡಿದ್ದಳು. ಇದರಂತೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಅಂತ್ಯಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆಯೇ ಇದ್ದಕ್ಕಿದ್ದಂತೆಯೇ ಚಿತೆಗೆ ಹಾರಿದ್ದಳು ಎಂದು ಅಧಿಕಾರಿ ಪ್ರೇಮ್ ಪ್ರಕಾಶ್ ಎಂಬುವವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT